October 2, 2026

**KYC Update Now Mandatory: Update e-KYC on FRUITS to Get PM-KISAN, Crop Insurance & Drought Relief Benefits**

KYC update here now : ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಪಿಎಂ ಕಿಸಾನ್ ಯೋಜನೆ ಸೇರಿದಂತೆ ಬರ ಪರಿಹಾರ, ಬೆಳೆ ವಿಮೆ ಸೇರಿದಂತೆ ಇತರ ಯೋಜನೆಗಳ ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ಇಕೆವೈಸಿ ಅಪ್ಡೇಟ್ ಮಾಡುವುದು ಕಡ್ಡಾಯವಾಗಿದೆ.

ಹೌದು, ರೈತರ ಹೆಸರಿನಲ್ಲಿರುವ ಎಲ್ಲಾ ಭೂ ಹಿಡುವಳಿಗಳನ್ನು ಕಡ್ಡಾಯವಾಗಿ ತಮ್ಮ ಎಫ್ಐಡಿಯಲ್ಲಿ ಸೇರ್ಪಡಿಸಿಕೊಳ್ಳುವುದು ಮತ್ತು ರೈತರ ಸಹಮತಿ ಪತ್ರವನ್ನು ವಿದ್ಯುನ್ಮಾನ ರೀತಿಯಲ್ಲಿ ನೀಡುವುದು ಕಡ್ಡಾಯವಾಗಿದೆ.

ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ, ತಾಲೂಕು ಕೃಷಿ ನಿರ್ದೇಶಕರನ್ನಾಗಲಿ ಅಥವಾ ಹಿರಿಯ ಸಹಾಯಕ ನಿರ್ದೇಶಕರನ್ನಾಗಲಿ ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕೃಷಿ ಉಪಕರಣ ಆಯ್ಕೆಮಾಡಿ

KYC update here now ಇಕೆವೈಸಿ ಅಪ್ಡೇಟ್ ಎಲ್ಲಿ ಮಾಡಿಸಬೇಕು

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇನ್ನೂ ಮುಂದೆ ಕೇಂದ್ರ ಸರ್ಕಾರದ ಸೌಲಭ್ಯ ಪಡೆಯಲು ರೈತ ಸಂಪರ್ಕ ಕೇಂದ್ರ, ಕೃಷಿ ಇಲಾಖೆ ಕಚೇರಿ, ತೋಟಗಾರಿಕೆ ಇಲಾಖೆ ಕಚೇರಿ, ರೇಷ್ಮೆ ಇಲಾಖೆ ಕಚೇರಿ ಹಾಗೂ ಗ್ರಾಮ ಒನ್ ಸೇವಾ ಕೇಂದ್ರದಲ್ಲಿ ರೈತರು ಇಕವೈಸಿ ಅಪ್ಡೇಟ್ ಮಾಡಬಹುದು.

ಇಕೆವೈಸಿ ಅಪ್ಡೇಟ್ ಮಾಡಲು ಯಾವ ಯಾವ ದಾಖಲೆ ಬೇಕು

ರೈತರು ಇಕೆವೈಸಿ ಮಾಡಿಸಲು ಪ್ರಮುಖವಾಗಿ ಆಧಾರ್ ಕಾರ್ಡ್ ಬೇಕಾಗುತ್ತದೆ. ಸಕ್ರೀಯ ಮೊಬೈಲ್ ಸಂಖ್ಯೆ ಹೊಂದಿರಬೇಕು. ಇದರೊಂದಿಗೆ ಜಮೀನುಗಳ ಪಹಣಿ ಪತ್ರ ಇರಬೇಕು.

ಇಕೆವೈಸಿ ಮಾಡಿಸಿದರೆ ಯಾವ ಸೌಲಭ್ಯಗಳು ಸಿಗುತ್ತವೆ

ಇಕೆವೈಸಿ ಮಾಡಿಸಿದರೆ ಮಾತ್ರ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆ. ಕನಿಷ್ಠ ಬೆಂಬಲಬೆಲೆ (ಎಂಎಸ್ಪಿ) ಸೌಲಭ್ಯ ಸಿಗುತ್ತದೆ. ಬೆಳೆ ವಿಮೆ ಹಣ ಸಿಗುತ್ತದೆ. ಬೆಳೆ ಹಾನಿ ಪರಿಹಾರ ಸಿಗುತ್ತದೆ. ಸರ್ಕಾರದ ಸೌಲಭ್ಯಗಳು ಸಿಗುತ್ತವೆ.

ಪಿಎಂ ಕಿಸಾನ್ ಹಣ ರೈತರಿಗೆ ಹೇಗೆ ಜಮೆಯಾಗುತ್ತದೆ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಡಿಬಿಟಿ ಮೂಲಕ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತದೆ.

ಪಿಎಂ ಕಿಸಾನ್ ಯೋಜನೆಯ ಹಣ ಯಾವಾಗ ಜಮೆಯಾಗುತ್ತದೆ

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಅತೀ ಶೀಘ್ರದಲ್ಲಿ ರೈತರ ಖಾತೆಗೆ ಜಮೆಯಾಗುತ್ತದೆ. ಹೌದು, ಕಳೆದ 21ನೇ ಕಂತಿನ ಹಣ ನವೆಂಬರ್ 19 ರಂದು ಜಮೆಯಾಗಿತ್ತು.ಈಗ 22ನೇ ಕಂತಿನ ಹಣ ರೈತರ ಖಾತೆಗೆ ಅತೀ ಶೀಘ್ರದಲ್ಲಿ ಜಮೆಯಾಗುತ್ತದೆ.

ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ತೆರೆದುಕೊಳ್ಳುವ ಪೇಜ್ ನಲ್ಲಿ ರೈತರು ತಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಹೋಬಳಿ ಹಾಗೂ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ಅಲ್ಲಿ ಫಲಾನುಭವಿಗಳ ಹೆಸರು ಕಾಣಿಸುತ್ತದೆ. ಅಲ್ಲಿ ನಿಮ್ಮ ಹೆಸರನ್ನು ನೀವು ಚೆಕ್ ಮಾಡಬಹುದು.

ಇದನ್ನೂ ಓದಿ : ಈ ತಾಲೂಕುಗಳ ರೈತರಿಗೆ ಮಾತ್ರ ಬರ ಪರಿಹಾರ ಹಣ ಸಿಗಲಿದೆ ಇಲ್ಲಿದೆ ಮಾಹಿತಿ

ಆದರೆ ಪಿಎಂ ಕಿಸಾನ್ ಯೋಜನೆಯ ಹಣ ಅಂದರೆ ಮುಂದಿನ ಕಂತಿನ ಹಣ ಇಕೆವೈಸಿ ಅಪ್ಡೇಟ್ ಮಾಡಿದರೆ ಮಾತ್ರ ಜಮೆಯಾಗುತ್ತದೆ. ಇಲ್ಲದಿದ್ದರೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆ ಮಾಡುವ ಪ್ರಕ್ರಿಯೆಯನ್ನು ತಡೆಹಿಡಿಯುವ ಸಾಧ್ಯತೆಯಿದೆ. ಹಾಗಾಗಿ ರೈತರು ಕೂಡಲೇ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಅಥವಾ ಕೃಷಿ ಇಲಾಖೆಯಲ್ಲಿ ಅಪ್ಡೇಟ್ ಮಾಡಿಸಿ ಸೌಲಭ್ಯ ಪಡೆಯಬಹುದು

Leave a Reply

Your email address will not be published. Required fields are marked *