October 25, 2026

**PNB Recruitment 2026: Punjab National Bank Hiring Graduates – Apply by October 13!**

PNB: ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ನೇಮಕಾತಿ! ಪದವೀಧರರಿಗೆ ಅವಕಾಶ । ಅಕ್ಟೋಬರ್ 13 ಕೊನೆಯ ದಿನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಭರ್ಜರಿ ಉದ್ಯೋಗಾವಕಾಶ! ಪಂಜಾಬ್ ನ್ಯಾಷನಲ್ ಬ್ಯಾಂಕ್ ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿ, ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 3, 2026 ರಿಂದ ಅವಕಾಶ ಕಲ್ಪಿಸಿದ್ದು, ಅರ್ಜಿ ಸಲ್ಲಿಸಲು 14-10-2026 ಕೊನೆಯ ದಿನಾಂಕವಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸ್ವತಃ ಅಪ್ಲಿಕೇಶನ್ ಫಾರ್ಮ್ ಅನ್ನು ಸಿದ್ಧಪಡಿಸಿಕೊಂಡು, ಅಗತ್ಯವಿರುವ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ, ನಿಗದಿತ ಕಚೇರಿ ವಿಳಾಸಕ್ಕೆ ಸಲ್ಲಿಸಿ.

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆ ಪಂಜಾಬ್ ನ್ಯಾಷನಲ್ ಬ್ಯಾಂಕ್, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ
ಹುದ್ದೆಯ ಹೆಸರು ಆಫೀಸ್ ಅಸಿಸ್ಟೆಂಟ್
ಹುದ್ದೆಯ ಸಂಖ್ಯೆ ಒಟ್ಟು 1 ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14-10-2026
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್

ಹುದ್ದೆಯ ಸಂಕ್ಷಿಪ್ತ ವಿವರ:

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಇಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ ಈ ಕೆಳಕಂಡಂತಿದೆ.

ಹುದ್ದೆಯ ವಿವರ ಹುದ್ದೆಯ ಸಂಖ್ಯೆ
ಆಫೀಸ್ ಅಸಿಸ್ಟೆಂಟ್ 1 ಹುದ್ದೆ

ಶೈಕ್ಷಣಿಕ ಅರ್ಹತೆ:

ಆಫೀಸ್ ಅಸಿಸ್ಟೆಂಟ್:

  • ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
  • ಬ್ಯಾಚುರಲ್ ಆಫ್ ಸೋಶಿಯಲ್ ವರ್ಕ್, ಬಿಎ ಹಾಗೂ ಬಿಕಾಂ ಪದವಿ ಪೂರ್ಣಗೊಳಿಸಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
  • ಅಭ್ಯರ್ಥಿಗಳು ಈ ಶೈಕ್ಷಣಿಕ ಅರ್ಹತೆಯೊಂದಿಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಕಡ್ಡಾಯವಾಗಿದೆ. ಸ್ಥಳೀಯ ಭಾಷೆಯಲ್ಲಿ ಕಂಪ್ಯೂಟರ್ ಟೈಪಿಂಗ್ ಕೌಶಲ್ಯ ಕಡ್ಡಾಯವಾಗಿದ್ದು,ಇಂಗ್ಲಿಷ್ ಭಾಷೆಯಲ್ಲಿ ಟೈಪಿಂಗ್ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
  • ಸ್ಥಳೀಯ ಭಾಷೆಯನ್ನು ನಿರರ್ಗಳವಾಗಿ ಮಾತನಾಡಲು ಹಾಗೂ ಬರೆಯಲು ಬರಬೇಕು ಹಾಗೂ ಹಿಂದಿ ಮತ್ತು ಇಂಗ್ಲಿಷ್ ಭಾಷಾ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ ವಿವರ:

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14-10-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಇದರನ್ವಯ ಅಭ್ಯರ್ಥಿಗಳು ಕನಿಷ್ಠ 22 ವರ್ಷದಿಂದ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

ಬ್ಯಾಂಕ್ ನ ನಿಯಮಾವಳಿಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಪರಿಶೀಲಿಸಿ.

ಅರ್ಜಿ ಶುಲ್ಕ:

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಯಾವುದೇ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

ವೇತನ ಶ್ರೇಣಿ:

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 20,000/- ದಿಂದ ರೂ. 27,500/- ವರೆಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.

ಅಭ್ಯರ್ಥಿಗಳ ಉತ್ತಮ ಕಾರ್ಯಕ್ಷಮತೆಯನ್ನು ಪರಿಗಣಿಸಿ, ಪ್ರತಿ ವರ್ಷ ರೂ. 1500/- ಪ್ರೋತ್ಸಾಹಧನಗಳನ್ನು ನೀಡಲಾಗುತ್ತದೆ. ಇವುಗಳ ಜೊತೆಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ನಿಯಮಾವಳಿಗಳ ಅನ್ವಯ ಸಿಗಬೇಕಾದ ಭತ್ಯೆಗಳು ಹಾಗೂ ಸೌಲಭ್ಯಗಳು ಸಿಗಲಿದೆ.

ಅರ್ಜಿ ಸಲ್ಲಿಸುವ ವಿಧಾನ:

  • ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
  • ನಂತರ ಅಭ್ಯರ್ಥಿಗಳು ಬಿಳಿ ಹಳೆಯ ಮೇಲೆ ನಿಮ್ಮ ಹೆಸರು, ವೈಯಕ್ತಿಕ ವಿವರ, ವಿಳಾಸ, ಶೈಕ್ಷಣಿಕ ಅರ್ಹತೆ, ಮೊಬೈಲ್ ನಂಬರ್, ಜನ್ಮ ದಿನಾಂಕ ಸೇರಿದಂತೆ ಇನ್ನಿತರ ಅಗತ್ಯ ವಿವರಗಳನ್ನು ಬೆರೆಯಿರಿ.
  • ನಿಗದಿತ ಜಾಗದಲ್ಲಿ ನಿಮ್ಮ ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ ವನ್ನು ಅಂಟಿಸಿ, ಫೋಟೋ ಮೇಲೆ ಸ್ವಯಂ ದೃಢೀಕರಣ ಸಹಿ ಮಾಡಿ.
  • ನಂತರ ವಯಸ್ಸಿನ ಪುರಾವೆ, ಪದವಿ ಅಂಕಪಟ್ಟಿ, ಪದವಿ ಪ್ರಮಾಣಪತ್ರ, ಕಂಪ್ಯೂಟರ್ ಪ್ರಮಾಣಪತ್ರ, ನಿವಾಸ ಪ್ರಮಾಣಪತ್ರ ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ.
  • ಈ ಎಲ್ಲ ದಾಖಲೆಗಳನ್ನು ಒಳಗೊಂಡ ಅಪ್ಲಿಕೇಶನ್ ಫಾರ್ಮ್ ಅನ್ನು ಒಂದು ಲಕೋಟೆಗೆ ಹಾಕಿ, ನೋಂದಾಯಿತ ಅಂಚೆ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ಫೈನಾನ್ಸಿಯಲ್ ಇನ್ಕ್ಲ್ಯೂಷನ್,

ಪಂಜಾಬ್ ನ್ಯಾಷನಲ್ ಬ್ಯಾಂಕ್,

ಸರ್ಕಲ್ ಆಫೀಸ್ ರಾಮಚಂದ್ರಾಪುರ

ಮೀನು ಮಾರುಕಟ್ಟೆ ಹತ್ತಿರ, ಬಿಹಾರಶರೀಫ್ – 803216

ಆಯ್ಕೆ ಪ್ರಕ್ರಿಯೆ:

  • ಶಾರ್ಟ್ ಲಿಸ್ಟ್:

ಅಭ್ಯರ್ಥಿಗಳು ಅಂಚೆ ಮೂಲಕ ಸಲ್ಲಿಸಿ ಅರ್ಜಿಯನ್ನು ಪರಿಶೀಲಿಸಿ, ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಕಂಪ್ಯೂಟರ್ ಜ್ಞಾನ ಹಾಗೂ ದಾಖಲೆಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಅನ್ನು ಸಿದ್ಧಪಡಿಸಲಾಗುತ್ತದೆ.

  • ಕಂಪ್ಯೂಟರ್ ಪ್ರಾವೀಣ್ಯತೆ ಪರೀಕ್ಷೆ:

ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳೀಯ ಭಾಷೆ ಹಾಗೂ ಇಂಗ್ಲಿಷ್ ಭಾಷೆಯ ಕಂಪ್ಯೂಟರ್ ಟೈಪಿಂಗ್ ಟೆಸ್ಟ್ ಅನ್ನು ನಡೆಸಲಾಗುತ್ತದೆ.

  • ದಾಖಲೆಗಳ ಪರಿಶೀಲನೆ:

ಕೊನೆಯದಾಗಿ ಕಂಪ್ಯೂಟರ್ ಪ್ರಾವೀಣ್ಯತೆ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಿ, ಅಂತಿಮವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 03-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14-10-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಬಯಸುತ್ತಿರುವ ಪದವೀಧರ ಯುವಕ-ಯುವತಿಯರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಆಫೀಸ್ ಅಸಿಸ್ಟೆಂಟ್ ಹುದ್ದೆಯು ಉತ್ತಮ ಅವಕಾಶವಾಗಿದೆ. ಯಾವುದೇ ಪದವಿ, ಕಂಪ್ಯೂಟರ್ ಜ್ಞಾನ ಹಾಗೂ ಸ್ಥಳೀಯ ಭಾಷೆಯಲ್ಲಿ ಟೈಪಿಂಗ್ ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ. ನೆನಪಿರಲಿ ಅರ್ಜಿ ಸಲ್ಲಿಸಲು 14-10-2026 ಕೊನೆಯ ದಿನಾಂಕವಾಗಿರುತ್ತದೆ.

Leave a Reply

Your email address will not be published. Required fields are marked *