Samruddhi: ಸ್ವಂತ ಉದ್ಯೋಗದ ಕನಸು ಕಾಣುತ್ತಿರುವ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್! ರಾಜ್ಯದ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರವು ಒಂದೊಳ್ಳೆಯ ಯೋಜನೆಯನ್ನು ಪರಿಚಯಿಸಿದ್ದು, ಆ ಯೋಜನೆಯೇ ಸಮೃದ್ಧಿ ಯೋಜನೆ.
ಈ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳು ಉಚಿತವಾಗಿ ವೃತ್ತಿಪರ ತರೆಬೇತಿ, ಉದ್ಯಮಶೀಲಾ ತರಬೇತಿ ಪಡೆದುಕೊಳ್ಳುವುದರ ಜೊತೆಗೆ ಸ್ವಂತ ಉದ್ಯೋಗ ಪ್ರಾರಂಭಿಸಲು ಆರ್ಥಿಕ ನೆರವನ್ನು ಸಹ ಪಡೆದುಕೊಳ್ಳಬಹುದು. ಸಮೃದ್ಧಿ ಯೋಜನೆಯಡಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ನಿರುದ್ಯೋಗಿ ಯುವಕ ಹಾಗೂ ಯುವತಿಯರು ಅರ್ಹರಾಗಿದ್ದಾರೆ.
21 ವರ್ಷದಿಂದ 50 ವರ್ಷದೊಳಗಿನ ಫಲಾನುಭವಿಗಳು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಪ್ರಸ್ತುತ ಲೇಖನದಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅಗತ್ಯ ದಾಖಲೆಗಳು ಯಾವುವು? ಅರ್ಹರು ಯಾರು? ಯೋಜನೆಯ ಉದ್ದೇಶವೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.
ಯೋಜನೆಯ ಅವಲೋಕನ:
| ಯೋಜನೆಯ ಹೆಸರು | ಸಮೃದ್ಧಿ ಯೋಜನೆ |
| ಅನುಷ್ಠಾನ ಸರ್ಕಾರ | ಕರ್ನಾಟಕ ಸರ್ಕಾರ |
| ಫಲಾನುಭವಿಗಳು | ಕರ್ನಾಟಕದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಿರುದ್ಯೋಗಿ ಯುವಕರು |
| ಯೋಜನೆಯ ಪ್ರಯೋಜನ | ಸ್ವಂತ ಉದ್ಯೋಗ ಪ್ರಾರಂಭಿಸಲು ರೂ. 10 ಲಕ್ಷದ ವರೆಗೆ ಬಂಡವಾಳದ ನೆರವು ಹಾಗೂ ಉಚಿತ ಉದ್ಯಮಶೀಲ ತರಬೇತಿ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಸಮೃದ್ಧಿ ಯೋಜನೆ ಎಂದರೇನು?
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಂತ ಉದ್ಯೋಮವನ್ನು ಪ್ರಾರಂಭಿಸಲು ಆರ್ಥಿಕ ನೆರವನ್ನು ನೀಡಿ ಅವರನ್ನು ಉದ್ಯೋಗಿಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಜಾರಿಗೊಳಿಸಿರುವ ಮಹತ್ವಾಕಾಂಕ್ಷೆಯ ಆರ್ಥಿಕ ಸಬಲೀಕರಣ ಮತ್ತು ಉದ್ಯಮಶೀಲ ಯೋಜನೆಯಾಗಿದೆ.
ಈ ಯೋಜನೆಯಡಿಯಲ್ಲಿ ಫಲಾನುಭವಿಗಳು ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಸರ್ಕಾರದಿಂದ ರೂ. 10 ಲಕ್ಷದ ವರೆಗೆ ಬಂಡವಾಳದ ನೆರವನ್ನು ಪಡೆದುಕೊಳ್ಳಬಹುದಾಗಿದ್ದು, ಜೊತೆಗೆ ಅವರು ಆಯ್ಕೆ ಮಾಡಿಕೊಂಡಿರುವ ವ್ಯವಹಾರ ಚಟುವಟಿಕೆಗಳನ್ನು ಯಾವುದೇ ನಷ್ಟವಿಲ್ಲದೆ ನಿರ್ವಹಿಸಲು ಅಗತ್ಯವಾದ ವೃತ್ತಿಪರ ಕೌಶಲ್ಯ ಹಾಗೂ ಉದ್ಯಮಶೀಲ ತರಬೇತಿಯನ್ನು ನೀಡಲಾಗುತ್ತದೆ. ಅರ್ಹ ಫಲಾನುಭವಿಗಳು ಈ ಒಂದು ತರಬೇತಿಯಲ್ಲಿ ವ್ಯಾಪಾರ ನಿರ್ವಹಣಾ, ಗ್ರಾಹಕ ಸೇವೆ, ಮಾರುಕಟ್ಟೆ ತಂತ್ರಗಳ ಕುರಿತು ಉಚಿತ ಕೌಶಲ್ಯ ತರೆಬೇತಿ ಪಡೆದುಕೊಳ್ಳಬಹುದು.
ಯೋಜನೆಯ ಮುಖ್ಯ ಉದ್ದೇಶ:
- ಸ್ವಂತ ಉದ್ಯೋಗ ಅವಕಾಶ ಕಲ್ಪಿಸುವುದು:
ಸಮೃದ್ಧಿ ಯೋಜನೆಯಡಿಯಲ್ಲಿ ನಿರುದ್ಯೋಗಿ ಯುವಕರನ್ನು ಕೇವಲ ನೌರಕರನ್ನಾಗಿ ಮಾಡುವುದಷ್ಟೇ ಅಲ್ಲದೆ, ಪ್ರತಿಷ್ಠಿತ ಫ್ರಾಂಚೈಸಿ ಅಥವಾ ಡೀಲರ್ಶಿಪ್ ಪಡೆದುಕೊಳ್ಳುವಂತೆ ಮಾಡಿ, ತಾವೇ ಸ್ವಂತ ಉದ್ಯೋಗವನ್ನು ಪ್ರಾರಂಭಿಸುವಂತೆ ಬಂಡವಾಳದ ನೆರವನ್ನು ಒದಗಿಸುವುದು ಹಾಗೂ ಸೂಕ್ತ ವೇದಿಕೆ ಕಲ್ಪಿಸುವುದು
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಯುವಕರ ಸಬಲೀಕರಣಕ್ಕೆ ಉತ್ತೇಜನ ನೀಡುವುದು:
ಸಮಾಜದ ಮುಖ್ಯ ವಾಹಿನಿಯಿಂದ ದೂರ ಉಳಿದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಸಮೃದ್ಧಿ ಯೋಜನೆಯಡಿಯಲ್ಲಿ ಆರ್ಥಿಕ ನೆರವು ಹಾಗೂ ಉಚಿತವಾಗಿ ಕೌಶಲ್ಯ ತರಬೇತಿ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ಹಾಗೂ ಸಮಾಜದಲ್ಲಿ ಗೌರವಯುತವಾಗಿ ಜೀವನ ನಡೆಸಲು ಅವಕಾಶ ಕಲ್ಪಿಸುವುದು.
- ನಿರುದ್ಯೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುವುದು:
ಸಮೃದ್ಧಿ ಯೋಜನೆಯಡಿಯಲ್ಲಿ ಉದ್ಯೋಗವಿಲ್ಲದೆ ಖಾಲಿ ಕುಳಿತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ರಾಜ್ಯದ ಎಲ್ಲ ನಿರುದ್ಯೋಗಿಗಳಿಗೆ ಸ್ವಂತ ಉದ್ಯೋಗ ಅವಕಾಶವನ್ನು ಕಲ್ಪಿಸಿ ಮೂಲಕ ರಾಜ್ಯದಲ್ಲಿನ ನಿರುದ್ಯೋಗಿ ಸಮಸ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡುವುದು.
- ಉದ್ಯಮಶೀಲತೆಯನ್ನು ಅಭಿವೃದ್ಧಿ ಪಡಿಸುವುದು:
ಸಮೃದ್ಧಿ ಯೋಜನೆಯಡಿಯಲ್ಲಿ ಆಯ್ಕೆಯಾದ ಯುವಕರಿಗೆ ಕೇವಲ ಹಣಕಾಸಿನ ನೆರವನ್ನು ಮಾತ್ರ ಒದಗಿಸುವುದಲ್ಲದೆ, ಪ್ರತಿಷ್ಠಿತ ಖಾಸಗಿ ಕಂಪನಿಗಳ ಮೂಲಕವೇ ಗ್ರಾಹಕ ಸೇವೆ, ಮಾರುಕಟ್ಟೆ ತಂತ್ರ, ವ್ಯಾಪಾರ ನಿರ್ವಹಣೆ ಕುರಿತು ಉಚಿತ ಕೌಶಲ್ಯ ತರಬೇತಿ ನೀಡಿ ಅವರನ್ನು ಉದ್ಯಮಶೀಲರನ್ನಾಗಿ ಮಾಡುವುದು.
ಅರ್ಹತಾ ಮಾನದಂಡಗಳು:
ಸಮೃದ್ಧಿ ಯೋಜನೆಯಡಿಯಲ್ಲಿ ಪ್ರಯೋಜನ ಪಡೆದುಕೊಳ್ಳಬೇಕೆಂದು ಬಯಸುವ ಯುವಕ ಯುವತಿಯರು ಈ ಕೆಳಗೆ ತಿಳಿಸಿರುವ ಅರ್ಹತಾ ಮಾನದಂಡಗಳು ಪೂರೈಸಿರಬೇಕಾಗುತ್ತದೆ.
- ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ಅರ್ಜಿದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಕ ಯುವತಿಯರಾಗಿರಬೇಕು.
- ಅರ್ಜಿದಾರರ ವಯಸ್ಸು ಕನಿಷ್ಠ 21 ವರ್ಷದಿಂದ ಗರಿಷ್ಟ 50 ವರ್ಷದ ಒಳಗೆ ಇರಬೇಕು.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ರೂ. 5 ಲಕ್ಷ ಮೀರಿರಬಾರದು.
- ಅರ್ಜಿದಾರರು ಉದ್ಯಮ ಘಟಕಗಳನ್ನು ಸ್ಥಾಪಿಸಲು ಅಗತ್ಯವಾದ ಸ್ಥಳಾವಕಾಶ ಹೊಂದಿರಬೇಕು.
- ಈ ಹಿಂದೆ ಸರ್ಕಾರದ ಯಾವುದೇ ನಿಗಮದ ಅಡಿಯಲ್ಲಿ ರೂ. 1 ಲಕ್ಷಕ್ಕಿಂತ ಹೆಚ್ಚಿನ ಸೌಲಭ್ಯ ಪಡೆದಿದ್ದರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.
- ಅರ್ಜಿದಾರರು ಕನಿಷ್ಠ SSLC ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರಬೇಕು.
ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್
- ಜಾತಿ ಪ್ರಮಾಣಪತ್ರ
- ಆದಾಯ ಪ್ರಮಾಣಪತ್ರ
- ಶೈಕ್ಷಣಿಕ ಅರ್ಹತೆ ಪ್ರಮಾಣಪತ್ರ
- ನಿವಾಸ ಪುರಾವೆ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ವ್ಯವಹಾರ ಯೋಜನೆ ದಾಖಲೆಗಳು
- ಪಾಸ್ ಪೋರ್ಟ್ ಸೈಜ್ ಫೋಟೋ
- ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
- ವಾಹನ ಚಾಲನಾ ಪರವಾನಗಿ (ಅನ್ವಹಿಸಿದರೆ)
- ಇತರೆ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಫಲಾನುಭವಿಗಳು ಕರ್ನಾಟಕದ ಸಂಬಂಧಪಟ್ಟ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ ಯೋಜನಾ ಪಟ್ಟಿಯಲ್ಲಿ ಸಮೃದ್ಧಿ ಯೋಜನೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಹೊಸ ಬಳಕೆದಾರರಾಗಿದ್ದರೆ, ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ಬಳಸಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ ಒಟಿಪಿ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಹೆಸರು, ವಿಳಾಸ, ಉದ್ಯೋಗದ ವಿವರ ಸೇರಿದಂತೆ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಈ ಮೇಲೆ ನೀಡಲಾದ ಎಲ್ಲ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಅಂತಿಮ ತೀರ್ಮಾನ:
ಕರ್ನಾಟಕ ಸರ್ಕಾರದ ಸಮೃದ್ಧಿ ಯೋಜನೆಯು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಂತ ಉದ್ಯೋಗ ಆರಂಭಿಸಲು ಸಹಕಾರಿಯಾಗಲಿದೆ. ಈ ಯೋಜನೆಯ ಮೂಲಕ ಆರ್ಥಿಕ ನೆರವು ಹಾಗೂ ಕೌಶಲ್ಯ ತರಬೇತಿ ಪಡೆಯಲು ಅವಕಾಶವಿದ್ದು, ಸ್ವಂತ ಉದ್ಯೋಗದ ನಿರೀಕ್ಷೆಯಲ್ಲಿರುವ ಫಲಾನುಭವಿಗಳು ಅರ್ಜಿ ಸಲ್ಲಿಸುವ ಮೊದಲು ಯೋಜನೆಯ ಅರ್ಹತಾ ಮಾನದಂಡಗಳು, ಅಗತ್ಯ ದಾಖಲೆಗಳು ಮತ್ತು ಯೋಜನೆಗೆ ಸಂಬಂಧಿಸಿದ ಇತರೆ ಮಾನದಂಡಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ ಸ್ವಂತ ಉದ್ಯೋಗ ಪ್ರಾರಂಭಿಸಲು ಸರ್ಕಾರದಿಂದ ಬಂಡವಾಳದ ನೆರವನ್ನು ಪಡೆದುಕೊಳ್ಳಿ.