NTPC Green Energy Recruitment 2026

NTPC: ವಾರ್ಷಿಕ ₹11 ಲಕ್ಷ ವೇತನ! ಎನ್‌ಟಿಪಿಸಿ ಗ್ರೀನ್ ಎನರ್ಜಿ ಲಿಮಿಟೆಡ್ ನಲ್ಲಿ ಉದ್ಯೋಗ ಅವಕಾಶ! ಸೆಪ್ಟೆಂಬರ್ 7 ಕೊನೆಯ ದಿನ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಮ್ಯಾನೇಜ್ಮೆಂಟ್ ಅಥವಾ ಇಂಜಿನಿಯರಿಂಗ್ ಪದವಿ ಮುಗಿಸಿ, ದೇಶದ ಪ್ರತಿಷ್ಠಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಉದ್ಯೋಗ ಮಾಡುವ ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ಈ ಮಾಹಿತಿ ನಿಮಗಾಗಿ. ಭಾರತದಲ್ಲಿನ ಪ್ರತಿಷ್ಠಿತ ನವೀಕರಿಸಬಹುದಾದ ಇಂಧನ ಇಂಧನ ಸಂಸ್ಥೆಯಾಗ ಏನ್.ಟಿ.ಪಿ.ಸಿ ಗ್ರೀನ್ ಎನರ್ಜಿ ಲಿಮಿಟೆಡ್ ಪ್ರಸ್ತುತ ಸಾಲಿನಲ್ಲಿ ಇಂಜಿನಿಯರಿಂಗ್ ಹಾಗೂ ಇತರೆ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಉದ್ಯೋಗದ ನಿರೀಕ್ಷೆಯಲ್ಲಿರುವ ಯುವ ವೃತ್ತಿಪರರು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇಲ್ಲಿ ಒಟ್ಟು 147 ಹುದ್ದೆಗಳು ಖಾಲಿ ಇದ್ದು, ಇಂಜಿನಿಯರಿಂಗ್ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ವಿಭಾಗದಲ್ಲಿ ನಿರ್ದಿಷ್ಟ ಅಂಕಗಳೊಂದಿಗೆ ಬಿಇ ಅಥವಾ ಬಿಟೆಕ್ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಏನ್.ಟಿ.ಪಿ.ಸಿ ಗ್ರೀನ್ ಎನರ್ಜಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಇಂಜಿನಿಯರಿಂಗ್ ಹಾಗೂ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 18-08-2026 ರಿಂದ ಅವಕಾಶ ಕಲ್ಪಿಸಿದ್ದು, 07-09-2026 ರ ವರೆಗೆ ಕಾಲಾವಕಾಶ ನೀಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಭಯಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಯ ಕಿರು ವಿಮರ್ಶೆ:

ಸಂಸ್ಥೆಯ ಹೆಸರು ಏನ್.ಟಿ.ಪಿ.ಸಿ ಗ್ರೀನ್ ಎನರ್ಜಿ ಲಿಮಿಟೆಡ್
ಹುದ್ದೆಯ ಹೆಸರು ಇಂಜಿನಿಯರಿಂಗ್ ಹಾಗೂ ಎಕ್ಸಿಕ್ಯೂಟಿವ್ ಹುದ್ದೆಗಳು
ಹುದ್ದೆಗಳ ಸಂಖ್ಯೆ 147 ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-09-2026
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ

ಹುದ್ದೆಯ ಸಂಕ್ಷಿಪ್ತ ವಿವರ:

ಏನ್.ಟಿ.ಪಿ.ಸಿ ಗ್ರೀನ್ ಎನರ್ಜಿ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ವಿವಿಧ ವಿಭಾಗಗಳಾಗಿ ಹಂಚಿಕೆ ಮಾಡಲಾದ ಇಂಜಿನಿಯರಿಂಗ್ ಹಾಗೂ ಎಕ್ಸಿಕ್ಯೂಟಿವ್ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಯ ವಿವರ ಹುದ್ದೆಯ ಸಂಖ್ಯೆ
ಇಂಜಿನಿಯರ್ (ಆರ್.ಇ ಸೇಫ್ಟಿ) 7 ಹುದ್ದೆಗಳು
ಇಂಜಿನಿಯರ್ (ಆರ್.ಇ ಮೆಕ್ಯಾನಿಕಲ್) 9 ಹುದ್ದೆಗಳು
ಇಂಜಿನಿಯರ್ (ಆರ್.ಇ ಸಿವಿಲ್) 43 ಹುದ್ದೆಗಳು
ಇಂಜಿನಿಯರ್ (ಆರ್.ಇ ಎಲೆಕ್ಟ್ರಿಕಲ್) 69 ಹುದ್ದೆಗಳು
ಎಕ್ಸಿಕ್ಯೂಟಿವ್ (ಆರ್.ಇ ರಾಜಭಾಷಾ) 1 ಹುದ್ದೆ
ಎಕ್ಸಿಕ್ಯೂಟಿವ್ (ಆರ್.ಇ ಹ್ಯೂಮನ್ ರಿಸೋರ್ಸ್) 4 ಹುದ್ದೆಗಳು
ಎಕ್ಸಿಕ್ಯೂಟಿವ್ (ಆರ್.ಇ ಸಿಎಸ್ಆರ್) 5 ಹುದ್ದೆಗಳು
ಎಕ್ಸಿಕ್ಯೂಟಿವ್ (ಆರ್.ಇ ಫೈನಾನ್ಸ್) 9 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಇಂಜಿನಿಯರ್:

  • ಇಂಜಿನಿಯರ್ ಆರ್.ಇ ಸೇಫ್ಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 65% (SC/ ST/ PwBD ಅಭ್ಯರ್ಥಿಗಳು 55%) ಅಂಕಗಳೊಂದಿಗೆ ಸೇಫ್ಟಿ ವಿಭಾಗದಲ್ಲಿ ಬಿಇ /ಬಿಟೆಕ್ ಪೂರ್ಣಗೊಳಿಸಿರಬೇಕು. ಹಾಗೂ ಸಂಬಂಧಿತ ವಿಭಾಗಗಳಲ್ಲಿ ಮೂರು ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.
  • ಇಂಜಿನಿಯರ್ ಆರ್.ಇ ಮೆಕ್ಯಾನಿಕಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 65% (SC/ ST/ PwBD ಅಭ್ಯರ್ಥಿಗಳು 55%) ಅಂಕಗಳೊಂದಿಗೆ ಮೆಕ್ಯಾನಿಕಲ್ ವಿಭಾಗದಲ್ಲಿ ಬಿಇ /ಬಿಟೆಕ್ ಪೂರ್ಣಗೊಳಿಸಿರಬೇಕು. ಹಾಗೂ ಸಂಬಂಧಿತ ವಿಭಾಗಗಳಲ್ಲಿ ಮೂರು ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.
  • ಇಂಜಿನಿಯರ್ ಆರ್.ಇ ಸಿವಿಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 65% (SC/ ST/ PwBD ಅಭ್ಯರ್ಥಿಗಳು 55%) ಅಂಕಗಳೊಂದಿಗೆ ಸಿವಿಲ್ ವಿಭಾಗದಲ್ಲಿ ಬಿಇ /ಬಿಟೆಕ್ ಪೂರ್ಣಗೊಳಿಸಿರಬೇಕು. ಹಾಗೂ ಸಂಬಂಧಿತ ವಿಭಾಗಗಳಲ್ಲಿ ಮೂರು ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.
  • ಇಂಜಿನಿಯರ್ ಆರ್.ಇ ಎಲೆಕ್ಟ್ರಿಕಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 65% (SC/ ST/ PwBD ಅಭ್ಯರ್ಥಿಗಳು 55%) ಅಂಕಗಳೊಂದಿಗೆ ಎಲೆಕ್ಟ್ರಿಕಲ್ ವಿಭಾಗದಲ್ಲಿ ಬಿಇ /ಬಿಟೆಕ್ ಪೂರ್ಣಗೊಳಿಸಿರಬೇಕು. ಹಾಗೂ ಸಂಬಂಧಿತ ವಿಭಾಗಗಳಲ್ಲಿ ಮೂರು ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.

ಎಕ್ಸಿಕ್ಯೂಟಿವ್:

  • ಎಕ್ಸಿಕ್ಯೂಟಿವ್ ಆರ್.ಇ ರಾಜಭಾಷಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹಿಂದಿ ಅಥವಾ ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಸಂಬಂಧಿತ ಕ್ಷೇತ್ರದಲ್ಲಿ ಮೂರು ವರ್ಷಗಳ ಅನುಭವವವನ್ನು ಹೊಂದಿರಬೇಕು.
  • ಎಕ್ಸಿಕ್ಯೂಟಿವ್ ಆರ್.ಇ ಮಾನವ ಸಂಪನ್ಮೂಲ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸುವುದರ ಜೊತೆಗೆ ಕನಿಷ್ಠ 65% ಅಂಕಗಳೊಂದಿಗೆ ಮಾನವ ಸಂಪನ್ಮೂಲ ವಿಭಾಗದಲ್ಲಿ ಎರಡು ವರ್ಷಗಳ ಎಂಬಿಎ ಕೋರ್ಸ್ ಪೂರ್ಣಗೊಳಿಸಿರಬೇಕು ಹಾಗೂ ಸಂಬಂಧಿತ ವಿಭಾಗದಲ್ಲಿ ಮೂರು ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.
  • ಎಕ್ಸಿಕ್ಯೂಟಿವ್ ಆರ್.ಇ ಸಿಎಸ್ಆರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಸ್ನಾತಕೋತ್ತರ ಪದವಿ/ ಡಿಪ್ಲೊಮಾ/ MSW/ ಎಂಬಿಎ ಅಥವಾ ಇಂಜಿನಿಯರಿಂಗ್ ನಲ್ಲಿ ಕನಿಷ್ಠ 65% ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು ಹಾಗೂ ಸಂಬಂಧಿತ ವಿಭಾಗದಲ್ಲಿ ಮೂರು ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.
  • ಎಕ್ಸಿಕ್ಯೂಟಿವ್ ಆರ್.ಇ ಫೈನಾನ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು CA/ CMA ಪೂರ್ಣಗೊಳಿಸಿರಬೇಕು ಹಾಗೂ ಹಣಕಾಸು ಮತ್ತು ಖಾತೆಗಳಲ್ಲಿ ಒಂದು ವರ್ಷದ ಅನುಭವವನ್ನು ಹೊಂದಿರಬೇಕು.

ವಯೋಮಿತಿ ವಿವರ:

ಏನ್.ಟಿ.ಪಿ.ಸಿ ಗ್ರೀನ್ ಎನರ್ಜಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಇಂಜಿನಿಯರ್ ಹಾಗೂ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಗರಿಷ್ಟ 35 ವರ್ಷ. ಹೊಂದಿರಬೇಕು

ವಯೋಮಿತಿ ಸಡಿಲಿಕೆ ವಿವರ:

  • ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
  • SC/ ST ಅಭ್ಯರ್ಥಿಗಳಿಗೆ: 5 ವರ್ಷ
  • PwBD (ಸಾಮಾನ್ಯ ವರ್ಗ) ಅಭ್ಯರ್ಥಿಗಳಿಗೆ: 10 ವರ್ಷ
  • PwBD (ಒಬಿಸಿ) ಅಭ್ಯರ್ಥಿಗಳಿಗೆ: 13 ವರ್ಷ
  • PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ ಶುಲ್ಕ:

ಇಂಜಿನಿಯರ್ ಹಾಗೂ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳಾದ ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಹಾಗೂ ಯುಪಿಐ ಮೂಲಕ ಪಾವತಿಸಬೇಕಾಗುತ್ತದೆ.

  • ಸಾಮಾನ್ಯ, ಒಬಿಸಿ, EWS ಅಭ್ಯರ್ಥಿಗಳಿಗೆ ರೂ. 500/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, PwBD, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ಇರಲಿದೆ.

ವೇತನ ಶ್ರೇಣಿ:

ಏನ್.ಟಿ.ಪಿ.ಸಿ ಗ್ರೀನ್ ಎನರ್ಜಿ ಲಿಮಿಟೆಡ್ ನ ಇಂಜಿನಿಯರಿಂಗ್ ಹಾಗೂ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಮೂರು ವರ್ಷಗಳ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 11,00,000/- ವರೆಗೆ ವೇತನವನ್ನು ನೀಡಲಾಗುತ್ತದೆ. ಇವುಗಳ ಜೊತೆಗೆ ಮನೆ ಬಾಡಿಗೆಯ ಭತ್ಯೆ ಸೇರಿದಂತೆ ಇತರೆ ಭತ್ಯೆಗಳು ಸಹ ಲಭ್ಯವಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಏನ್.ಟಿ.ಪಿ.ಸಿ ಗ್ರೀನ್ ಎನರ್ಜಿ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಇಮೇಲ್ ಐಡಿ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
  • ನಂತರ ಅಲ್ಲಿ ಕೇಳಲಾದ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಅನುಭವ ವಿವರ ಸೇರಿದಂತೆ ಇನ್ನಿತರ ಎಲ್ಲ ವಿವರಗಳನ್ನು ಭರ್ತಿ ಮಾಡಿ.
  • ನಂತರ ಶೈಕ್ಷಣಿಕ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ಪಾಸ್ ಪೋರ್ಟ್ ಸೈಜ್ ಫೋಟೋ, ಅಭ್ಯರ್ಥಿಗಳ ಸಹಿ ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಅರ್ಜಿಯನ್ನು ಇನ್ನೊಮ್ಮೆ ಪರಿಶೀಲಿಸಿ ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಕಂಪ್ಯೂಟರ್ ಆಧಾರಿತ ವಿಷಯ ಜ್ಞಾನ ಪರೀಕ್ಷೆ, ಹಾಗೂ ಆಪ್ಟಿಟ್ಯೂಡ್ ಟೆಸ್ಟ್ ನಡೆಸಲಾಗುತ್ತದೆ. ವಿಷಯ ಜ್ಞಾನ ಪರೀಕ್ಷೆಯಲ್ಲಿ 40% ಅಂಕಗಳನ್ನು ಹಾಗೂ ಆಪ್ಟಿಟ್ಯೂಡ್ ಟೆಸ್ಟ್ ನಲ್ಲಿ 30% ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿರುತ್ತದೆ.
  • ಲಿಖಿತ ಪರೀಕ್ಷೆಯಲ್ಲಿ ನಿರ್ದಿಷ್ಟ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ.
  • ಅಂತಿಮವಾಗಿ ಲಿಖಿತ ಪರೀಕ್ಷೆ, ಅನುಭವ ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 18-08-2026
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-09-2026

ಅಂತಿಮ ತೀರ್ಮಾನ:

ಏನ್.ಟಿ.ಪಿ.ಸಿ ಗ್ರೀನ್ ಎನರ್ಜಿ ಲಿಮಿಟೆಡ್ ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಇಂಜಿನಿಯರ್ ಹಾಗೂ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಹುದ್ದೆಗೆ ಸಂಬಂಧಿಸಿದ ನಿರ್ದಿಷ್ಟ ಶೈಕ್ಷಣಿಕ ಅರ್ಹತೆ ಹಾಗೂ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ನಿಗದಿಪಡಿಸಿದ ಕೊನೆಯ ದಿನಾಕದೊಳಗಾಗಿ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.

Leave a Comment

Your email address will not be published. Required fields are marked *

Scroll to Top