KEA Teacher Recruitment 2026

KEA: ₹81,800/- ವೇತನ! ವಸತಿ ಶಾಲಾ ಶಿಕ್ಷಕರ ನೇಮಕಾತಿ! ಸೆಪ್ಟೆಂಬರ್ 18 ಕೊನೆಯ ದಿನಾಂಕ

KEA Teacher Recruitment 2026

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರು ಹುದ್ದೆಗಳನ್ನು ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದಗಳಿಗೆ ಹಂಚಿಕೆ ಮಾಡಲಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಭಯಸುವ ಅಭ್ಯರ್ಥಿಗಳು ನಿರ್ದಿಷ್ಟ ಅಂಕಗಳನ್ನು ಗಳಿಸುವುದರೊಂದಿಗೆ ಪಿಯುಸಿ ಪಾಸ್ ಆಗಿರಬೇಕು ಹಾಗೂ ಡಿಪ್ಲೊಮಾ ಇನ್ ಎಲಿಮೆಂಟರಿ ಎಜುಕೇಶನ್ ಪೂರ್ಣಗೊಳಿಸಿರಬೇಕು. ಬೋಧನಾ ವೃತ್ತದಲ್ಲಿ ತೊಡಗಿಸಿಕೊಳ್ಳಲು ಬಯಸುವ ಹಾಗೂ ಸರ್ಕಾರಿ ವಲಯದಲ್ಲಿ ಉತ್ತಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿರುತ್ತದೆ.

ಶಿಕ್ಷಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಕನ್ನಡ ಭಾಷಾ ಪರೀಕ್ಷೆ ನಡೆಸುವ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಅತ್ಯಾಕರ್ಷಕ ವೇತನವನ್ನು ಸಹ ನೀಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಸ್ತುತ ಲೇಖನದಲ್ಲಿ ನೀಡಲಾದ ಹುದ್ದೆಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಹತಾ ಖಚಿತಪಡಿಸಿಕೊಂಡ ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆಯ ಹೆಸರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಇಲಾಖೆಯ ಹೆಸರು ಕರ್ನಾಟಕ ಸಮಾಜ ಕಲ್ಯಾಣ ಇಲಾಖೆ (ವಸತಿ ಶಾಲೆ)
ಹುದ್ದೆಯ ಹೆಸರು ವಸತಿ ಶಾಲಾ ಶಿಕ್ಷಕರು
ಹುದ್ದೆಗಳ ಸಂಖ್ಯೆ 140 ಹುದ್ದೆಗಳು
ಉದ್ಯೋಗ ಸ್ಥಳ ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18-09-2026
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ

ಹುದ್ದೆಯ ಸಂಕ್ಷಿಪ್ತ ವಿವರ:

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರು ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಯಾವ ಯಾವ ವೃಂದಗಳಿಗೆ ಎಷ್ಟೆಷ್ಟು ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ ಎನ್ನುವುದನ್ನು ಈ ಕೆಳಗಿನ ತಿಳಿದುಕೊಳ್ಳೋಣ.

ಹುದ್ದೆಯ ವಿವರ ಹುದ್ದೆಯ ಸಂಖ್ಯೆ
ವಸತಿ ಶಾಲಾ ಶಿಕ್ಷಕರು (ಕಲ್ಯಾಣ ಕರ್ನಾಟಕ ವೃಂದ) 40 ಹುದ್ದೆಗಳು
ವಸತಿ ಶಾಲಾ ಶಿಕ್ಷಕರು (ಉಳಿಕೆ ಮೂಲ ವೃಂದ) 100 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ವಸತಿ ಶಾಲಾ ಶಿಕ್ಷಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಈ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

  • ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ಪಿಯುಸಿ ಪಾಸ್ ಆಗಿರುವುದರ ಜೊತೆಗೆ ಎರಡು ವರ್ಷಗಳ ಡಿಪ್ಲೊಮಾ ಇನ್ ಎಲಿಮೆಂಟರಿ ಎಜುಕೇಶನ್ ಉತ್ತೀರ್ಣರಾಗಿರಬೇಕು ಅಥವಾ ಕನಿಷ್ಠ 50% ಅಂಕಗಳೊಂದಿಗೆ ಪಿಯುಸಿ ಪಾಸ್ ಆಗಿರುವುದರ ಜೊತೆಗೆ ನಾಲ್ಕು ವರ್ಷಗಳ ಬ್ಯಾಚುಲರ್ ಇನ್ ಎಲಿಮೆಂಟರಿ ಎಜುಕೇಶನ್ ಉತ್ತೀರ್ಣರಾಗಿರಬೇಕು ಅಥವಾ ಕನಿಷ್ಠ 50% ಅಂಕಗಳೊಂದಿಗೆ ಪಿಯುಸಿ ಪಾಸ್ ಆಗಿರುವುದರ ಜೊತೆಗೆ ಎರಡು ವರ್ಷಗಳ ಡಿಪ್ಲೊಮಾ ಇನ್ ಎಜುಕೇಶನ್ ಪೂರ್ಣಗೊಳಿಸಿರಬೇಕು.
  • ಇದರೊಂದಿಗೆ ಕರ್ನಾಟಕ ಸರ್ಕಾರ ಅಥವಾ ಭಾರತ ಸರ್ಕಾರ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಪಿಯುಸಿ ಪರೀಕ್ಷೆಯಲ್ಲಿ ಗಳಿಸಬೇಕಾದ ಅಂಕಗಳಲ್ಲಿ ಸಡಿಲಿಕೆ ಇರಲಿದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.

ವಯೋಮಿತಿ ವಿವರ:

ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 18-09-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.

ಇದರನ್ವಯ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ ವಯೋಮಿತಿಯ ವಿವರ ಈ ಕೆಳಕಂಡಂತಿದೆ.

  • ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು: 40 ವರ್ಷ
  • ಪ್ರವರ್ಗ 2A, 2B. 3A, 3B ಅಭ್ಯರ್ಥಿಗಳು: 43 ವರ್ಷ
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -I ಅಭ್ಯರ್ಥಿಗಳು: 45 ವರ್ಷ

ವಯೋಮಿತಿ ಸಡಿಲಿಕೆ ವಿವರ:

  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಸೇವೆ ಸಲ್ಲಿಸಿದ ಅವಧಿಯ ಜೊತೆಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.
  • ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
  • ವಿಧವೆಯರಿಗೆ: 10 ವರ್ಷ
  • ಜೀತ ಕಾರ್ಮಿಕರಾಗಿದ್ದ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

  • ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 750/- ಅರ್ಜಿ ಶುಲ್ಕವಾಗಿದ್ದು, ಇದರಲ್ಲಿ 500/- ಅರ್ಜಿ ಶುಲ್ಕ ಮತ್ತು ರೂ. 250/- ಪ್ರಕ್ರಿಯೆ ಶುಲ್ಕವಾಗಿರುತ್ತದೆ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -I, ಮಾಜಿ ಸೈನಿಕ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ: ರೂ. 500/- ಅರ್ಜಿ ಶುಲ್ಕವಾಗಿದ್ದು, ಇದರಲ್ಲಿ 250/- ಅರ್ಜಿ ಶುಲ್ಕ ಮತ್ತು ರೂ. 250/- ಪ್ರಕ್ರಿಯೆ ಶುಲ್ಕವಾಗಿರುತ್ತದೆ.
  • ಸಾಮಾನ್ಯ ಅರ್ಹತೆ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 250/- (ಪ್ರಕ್ರಿಯೆ ಶುಲ್ಕ ಮಾತ್ರ)

ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬೇಕಾಗುತ್ತದೆ. ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸುವುದಿಲ್ಲ.

ವೇತನ ಶ್ರೇಣಿ:

ವಸತಿ ಶಾಲಾ ಶಿಕ್ಷಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಎರಡು ವರ್ಷಗಳ ಖಾಯಂ ಪೂರ್ವ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 41,300/- ದಿಂದ ರೂ. 81,800/- ವರೆಗೆ ವೇತನವನ್ನು ನೀಡಲಾಗುತ್ತದೆ ಹಾಗೂ ಇವುಗಳ ಜೊತೆಗೆ ಸರ್ಕಾರದ ನಿಯಮಾನುಸಾರ ರಾಷ್ಟ್ರಿಯ ಪಿಂಚಣಿ ಯೋಜನೆ ಅನ್ವಯವಾಗಲಿದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ನೇಮಕಾತಿ ಪೋರ್ಟಲ್ ನಲ್ಲಿ ಕಾಣುವ ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲಾ ಶಿಕ್ಷಕರ ನೇಮಕಾತಿ 2026 ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಮಾನ್ಯ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿ ಬಳಸಿ ಲಾಗಿನ್ ಆಗಿ.
  • ನಂತರ ಹುದ್ದೆಗೆ ಸಂಬಂಧಿಸಿದ ಅಫ್ಲಿಕೇಷನ್ ಫಾರ್ಮ್ ನಲ್ಲಿ ಶೈಕ್ಷಣಿಕ ವಿವರ, ವಯೋಮಿತಿ ವಿವರ, ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಅಗತ್ಯ ಪ್ರಮಾಣಪತ್ರವನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಸ್ಪರ್ಧಾತ್ಮಕ ಪರೀಕ್ಷೆ:

ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಆನ್ಲೈನ್ ಮೂಲಕ ಅಥವಾ ಆಫ್ಲೈನ್ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯು ಒಟ್ಟು ಎರಡು ಪತ್ರಿಕೆಗಳನ್ನು ಒಳಗೊಂಡಿದ್ದು, ಒಟ್ಟು 200 ಅಂಕಗಳನ್ನು ಒಳಗೊಂಡಿರುತ್ತದೆ. ಪತ್ರಿಕೆ -I ಸಾಮಾನ್ಯ ಜ್ಞಾನ, ಪ್ರಚಲಿತ ವಿದ್ಯಮಾನ, ಭಾರತದ ಸಂವಿಧಾನ, ಇತಿಹಾಸ, ಭೂಗೋಳ, ಪಂಚಾಯತ್ ರಾಜ್, ಆರ್ಥಿಕತೆ ಹಾಗೂ ಪರಿಸರ ವಿಜ್ಞಾನಗಳ ಕುರಿತು ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಹಾಗೂ ಪತ್ರಿಕೆ -II ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಹಾಗೂ ಕಂಪ್ಯೂಟರ್ ಜ್ಞಾನದ ಕುರಿತು ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪ್ರತಿ ಪತ್ರಿಕೆಗೂ ತಲಾ 2 ಗಂಟೆ ಕಾಲಾವಕಾಶವನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಕನಿಷ್ಠ 35% ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ. ಹಾಗೂ ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.

  • ಕನ್ನಡ ಭಾಷಾ ಪರೀಕ್ಷೆ:

SSLC ಹಂತದಲ್ಲಿ ಕನ್ನಡವನ್ನು ಪ್ರಥಮ ಭಾಷೆ ಅಥವಾ ದ್ವಿತೀಯ ಭಾಷೆಯಾಗಿ ವ್ಯಾಸಂಗ ಮಾಡದಿದ್ದರೆ, ಆ ಅಭ್ಯರ್ಥಿಗಳು ಕಡ್ಡಾಯವಾಗಿ 150 ಅಂಕಗಳ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಅಭ್ಯರ್ಥಿಗಳು 50% ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿರುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 21-08-2026
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18-09-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 19-09-2026
ಪ್ರಮುಖ ಲಿಂಕುಗಳು:

ಅಂತಿಮ ತೀರ್ಮಾನ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲಾ ಶಿಕ್ಷಕರು ಹುದ್ದೆಗಳಾ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಶಿಕ್ಷಕರಾಗಿ ಸೇವೆ ಸಲ್ಲಿಸುವ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಿಕೊಂಡು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.

Leave a Comment

Your email address will not be published. Required fields are marked *

Scroll to Top