October 2, 2026

ZP Raichur Recruitment 2026 

ZP Raichur: ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2026! ಯಾವುದೇ ಅರ್ಜಿ ಶುಲ್ಕ + ಲಿಖಿತ ಪರೀಕ್ಷೆ ಇಲ್ಲ! ಅಕ್ಟೋಬರ್ 7 ಕೊನೆಯ ದಿನ

ರಾಯಚೂರಿನಲ್ಲಿ ವೃತ್ತಿಜೀವನದ ಕನಸು ಕಾಣುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ! ರಾಯಚೂರು ಜಿಲ್ಲಾ ಪಂಚಾಯತಿಯು ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಒಟ್ಟು 7 ಬ್ಲಾಕ್ ಕೋಆರ್ಡಿನೇಟರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ZP Raichur Recruitment 2026

ಇಲ್ಲಿ ಖಾಲಿರುವ ಇರುವ ಬ್ಲಾಕ್ ಕೋಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಸಿಎ, ಬಿಎಸ್ಸಿ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಐಟಿ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 20,000/- ವರೆಗೆ ವೇತನವನ್ನು ನೀಡಲಾಗುತ್ತದೆ.

ರಾಯಚೂರು ಜಿಲ್ಲಾ ಪಂಚಾಯತಿಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಬ್ಲಾಕ್ ಕೋಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 24-09-2026 ರಿಂದ 07-10-2026 ರ ವರೆಗೂ ಕಾಲಾವಕಾಶ ನೀಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಅರ್ಹತೆಯನ್ನು ಖಚಿತಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆಯ ಹೆಸರು ಜಿಲ್ಲಾ ಪಂಚಾಯತ್, ರಾಯಚೂರು
ಹುದ್ದೆಯ ಹೆಸರು ಬ್ಲಾಕ್ ಕೋಆರ್ಡಿನೇಟರ್
ಹುದ್ದೆಗಳ ಸಂಖ್ಯೆ 7 ಹುದ್ದೆಗಳು
ಉದ್ಯೋಗ ಸ್ಥಳ ರಾಯಚೂರು – ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-10-2026

ಹುದ್ದೆಯ ಸಂಕ್ಷಿಪ್ತ ವಿವರ:

ರಾಯಚೂರು ಜಿಲ್ಲಾ ಪಂಚಾಯತಿ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಇಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಬ್ಲಾಕ್ ಕೋಆರ್ಡಿನೇಟರ್ 7 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ರಾಯಚೂರು ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಬ್ಲಾಕ್ ಕೋಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಸಿಎ, ಬಿಎಸ್ಸಿ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಐಟಿ ವಿಭಾಗದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು ಜೊತೆಗೆ ಐಟಿ ಕ್ಷೇತ್ರದಲ್ಲಿ ಒಂದು ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

ವಯೋಮಿತಿ ವಿವರ:

ರಾಯಚೂರು ಜಿಲ್ಲಾ ಪಂಚಾಯತಿ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಇಲ್ಲಿ ಖಾಲಿ ಇರುವ ಬ್ಲಾಕ್ ಕೋಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ರಾಯಚೂರು ಜಿಲ್ಲಾ ಪಂಚಾಯತಿಯ ನಿಯಮಾವಳಿಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಬಹುದು. ಇದರ ಕುರಿತು ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪರಿಶೀಲಿಸಿ.

ಅರ್ಜಿ ಶುಲ್ಕ:

ರಾಯಚೂರು ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಬ್ಲಾಕ್ ಕೋಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ರಾಯಚೂರು ಜಿಲ್ಲಾ ಪಂಚಾಯತಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ರಾಯಚೂರು ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಬ್ಲಾಕ್ ಕೋಆರ್ಡಿನೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 20,000/- ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ರಾಯಚೂರು ಜಿಲ್ಲಾ ಪಂಚಾಯತಿಯ ಅಧಿಕೃತ ವೆಬ್ಸೈಟ್ https://zpraichur.karnataka.gov.in/kn ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ ಇತ್ತೀಚಿನ ಸುದ್ದಿ ಲಿಂಕ್ ಮೇಲೆ ಕ್ಲಿಕ್ ಮಾಡಿ. ಬ್ಲಾಕ್ ಕೋಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ವಿಳಾಸ, ಶೈಕ್ಷಣಿಕ ವಿವರ, ವೈಯಕ್ತಿಕ ವಿವರ ಹಾಗೂ ಅನುಭವ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
  • ಶೈಕ್ಷಣಿಕ ಪ್ರಮಾಣಪತ್ರ, ಪಾಸ್ ಪೋರ್ಟ್ ಸೈಜ್ ಫೋಟೋ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅನುಭವ ಪ್ರಮಾಣಪತ್ರ ,ಶೈಕ್ಷಣಿಕ ಅಂಕಪಟ್ಟಿ ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಬ್ಲಾಕ್ ಕೋಆರ್ಡಿನೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಅನುಭವಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ, ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

  • ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆಗೆ 50 ಅಂಕಗಳನ್ನು, ಕಾರ್ಯಾನುಭವಕ್ಕೆ 25 ಅಂಕಗಳನ್ನು ನಿಗದಿಪಡಿಸಿ, ಇವುಗಳಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನಕ್ಕೆ ಒಟ್ಟು 25 ಅಂಕಗಳನ್ನು ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 24-09-2026
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-10-2026
ದಾಖಲೆಗಳನ್ನು ಪರಿಶೀಲನೆ ನಡೆಸುವ ದಿನಾಂಕ 12-10-2026

ಪ್ರಮುಖ ಲಿಂಕುಗಳು:

ಅಂತಿಮ ತೀರ್ಮಾನ:

ರಾಯಚೂರು ಜಿಲ್ಲಾ ಪಂಚಾಯತಿಯ ಬ್ಲಾಕ್ ಕೋಆರ್ಡಿನೇಟರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹20,000 ವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-10-2026. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಅನುಭವದ ಷರತ್ತುಗಳನ್ನು ಖಚಿತವಾಗಿ ಪರಿಶೀಲಿಸಿ, ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

Leave a Reply

Your email address will not be published. Required fields are marked *