October 25, 2026

Bagalkot Co-operative Society Recruitment 2026 – Apply Without Any Fee! Last Date: October 31

Co operative: ಬಾಗಲಕೋಟೆಯ ಸಹಕಾರ ಸಂಘದಲ್ಲಿ ನೇಮಕಾತಿ 2026! ಯಾವುದೇ ಅರ್ಜಿ ಶುಲ್ಕ ಇಲ್ಲ । ಕೊನೆಯ ದಿನಾಂಕ ಅಕ್ಟೋಬರ್ 31

ಬಾಗಲಕೋಟೆ ಜಿಲ್ಲೆಯ ವ್ಯಾಪ್ತಿಯಲ್ಲಿ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗಾವಕಾಶ! ಬಾಗಲಕೋಟೆಯ ಪಂಚಮಸಾಲಿ ಪತ್ತಿನ ಸಹಕಾರ ಸಂಘವು ಪ್ರಸ್ತುತ 2026 ನೇ ಸಾಲಿನ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದಗೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Co operative Society Job Recruitment 2026

ಇಲ್ಲಿ ಮುಖ್ಯ ವ್ಯವಸ್ಥಾಪಕ, ಹಿರಿಯ ಸಹಾಯಕ, ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್ ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಬ್ಯಾಂಕಿಂಗ್ ಮತ್ತು ಸಹಕಾರ ಕ್ಷೇತ್ರದಲ್ಲಿ ಉತ್ತಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಇದು ಉತ್ತಮ ಉದ್ಯೋಗಾವಕಾಶವಾಗಿದೆ. ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ SSLC, PUC, ಬಿಬಿಎ, ಬಿಕಾಂ ಪದವಿ ಪೂರ್ಣಗೊಳಿಸಿರಬೇಕು.

ಬಾಗಲಕೋಟೆಯ ಪಂಚಮಸಾಲಿ ಪತ್ತಿನ ಸಹಕಾರ ಸಂಘದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಹಾಗೂ ಕಾರ್ಯಕ್ಷಮತೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಅತ್ತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆಯ ಹೆಸರು ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ, ಬಾಗಲಕೋಟೆ
ಹುದ್ದೆಯ ಹೆಸರು ಚೀಫ್ ಎಕ್ಸಿಕ್ಯೂಟಿವ್, ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್, ಕಂಪ್ಯೂಟರ್ ಆಪರೇಟರ್, ಅಟೆಂಡರ್ ಹಾಗೂ ಪ್ಯೂನ್ ಹುದ್ದೆಗಳು
ಹುದ್ದೆಗಳ ಸಂಖ್ಯೆ 10 ಹುದ್ದೆಗಳು
ಉದ್ಯೋಗ ಸ್ಥಳ ಬಾಗಲಕೋಟೆ – ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-10-2026

ಹುದ್ದೆಯ ಸಂಕ್ಷಿಪ್ತ ವಿವರ:

ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ, ಬಾಗಲಕೋಟೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಪ್ಯೂನ್ 3 ಹುದ್ದೆಗಳು
ಜೂನಿಯರ್ ಅಸಿಸ್ಟೆಂಟ್ 2 ಹುದ್ದೆಗಳು
ಸೀನಿಯರ್ ಅಸಿಸ್ಟೆಂಟ್ 2 ಹುದ್ದೆಗಳು
ಚೀಫ್ ಎಕ್ಸಿಕ್ಯೂಟಿವ್ 1 ಹುದ್ದೆ
ಕಂಪ್ಯೂಟರ್ ಆಪರೇಟರ್ 1 ಹುದ್ದೆ
ಅಟೆಂಡರ್ 1 ಹುದ್ದೆ

ಶೈಕ್ಷಣಿಕ ಅರ್ಹತೆ:

  • ಪ್ಯೂನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
  • ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
  • ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು PUC ಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಈ ಒಂದು ಕ್ಷೇತ್ರದಲ್ಲಿ ಕಾರ್ಯಾನುಭವ ಹೊಂದಿರುವ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.
  • ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು PUC ಯಲ್ಲಿ ತೇರ್ಗಡೆ ಹೊಂದಿರಬೇಕು.
  • ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಭಾಗದಲ್ಲಿ ಬಿಕಾಂ ಪದವಿ ಪಡೆದಿರಬೇಕು.
  • ಚೀಫ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಕಾಂ ಅಥವಾ ಬಿಬಿಎ ಪದವಿ ಪೂರ್ಣಗೊಳಿಸಿರಬೇಕು. ಸಂಬಂಧಪಟ್ಟ ಬ್ಯಾಂಕಿಂಗ್ ಅಥವಾ ಸಹಕಾರ ಕ್ಷೇತ್ರದಲ್ಲಿ ಕಾರ್ಯಾನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ ವಿವರ:

ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ, ಬಾಗಲಕೋಟೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಾವಳಿಗಳ ಪ್ರಕಾರ ಹಾಗೂ ಸಹಕಾರ ಸಂಘಗಳ ಮಾರ್ಗಸೂಚಿ ಪ್ರಕಾರ ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ಸಡಿಲಿಕೆ ಇರಲಿದೆ.

  • ಇತರೆ ಹಿಂದುಳಿದ ವರ್ಗಗಳ (ಪ್ರವರ್ಗ 2A, 2B, 3A, 3B) ಅಭ್ಯರ್ಥಿಗಳಿಗೆ: 3 ವರ್ಷ
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ, ಪ್ರವರ್ಗ – 1 ಅಭ್ಯರ್ಥಿಗಳಿಗೆ: 5 ವರ್ಷ

ಅರ್ಜಿ ಶುಲ್ಕ:

ಬಾಗಲಕೋಟೆಯ ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಚೀಫ್ ಎಕ್ಸಿಕ್ಯೂಟಿವ್, ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್, ಕಂಪ್ಯೂಟರ್ ಆಪರೇಟರ್, ಅಟೆಂಡರ್ ಹಾಗೂ ಪ್ಯೂನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.

ವೇತನ ಶ್ರೇಣಿ:

ಚೀಫ್ ಎಕ್ಸಿಕ್ಯೂಟಿವ್, ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್, ಕಂಪ್ಯೂಟರ್ ಆಪರೇಟರ್, ಅಟೆಂಡರ್ ಹಾಗೂ ಪ್ಯೂನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬಾಗಲಕೋಟೆಯ ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಅತ್ತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಇವುಗಳ ಜೊತೆಗೆ ಇತರೆ ಸೌಲಭ್ಯಗಳು ಲಭ್ಯವಾಗಲಿದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೊದಲು ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
    • ನಂತರ ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘದ ಮುಖ್ಯ ಕಚೇರಿಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಕೇಳಿ ಪಡೆಯಿರಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಶೈಕ್ಷಣಿಕ ವಿವರ, ವೈಯಕ್ತಿಕ ವಿವರ, ವಿಳಾಸ ಹಾಗೂ ಮೀಸಲಾತಿ ವಿವರಗಳನ್ನು, ಹುದ್ದೆಯ ವಿವರ ಸೇರಿದಂತೆ ಇನ್ನಿತರ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
  • ಶೈಕ್ಷಣಿಕ ಪ್ರಮಾಣಪತ್ರ, ವಯಸ್ಸಿನ ಪುರಾವೆ, ಅನುಭವ ಪ್ರಮಾಣಪತ್ರ, ಪಾಸ್ ಪೋರ್ಟ್ ಸೈಜ್ ಫೋಟೋ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ.
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಇನ್ನೊಮ್ಮೆ ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-10-2026 ರ ಒಳಗೆ ಈ ಕೆಳಗೆ ತಿಳಿಸಿರುವ ವಿಳಾಸಕ್ಕೆ ಖುದ್ದಾಗಿ ಭೇಟಿ ನೀಡಿ ಅಥವಾ ಅಂಚೆ ಮೂಲಕ ಸಲ್ಲಿಸಿ.

ಅರ್ಜಿ ಸಲ್ಲಿಸುವ ವಿಳಾಸ:

ಅಧ್ಯಕ್ಷರು,

ವೀರಶೈವ ಪಂಚಮಸಾಲಿ ಪತ್ತಿನ ಸಹಕಾರಿ ಸಂಘ ನಿಯಮಿತ, ಬಾಗಲಕೋಟೆ – 587101

ಆಯ್ಕೆ ಪ್ರಕ್ರಿಯೆ:

  • ದಾಖಲೆ ಪರಿಶೀಲನೆ:

ಮೊದಲ ಹಂತದಲ್ಲಿ ಅಭ್ಯರ್ಥಿಗಳು ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಿದ ಅರ್ಜಿಯನ್ನು ಪರಿಶೀಲನೆ ನಡೆಸಲಾಗುತ್ತದೆ.

  • ಶಾರ್ಟ್ ಲಿಸ್ಟ್:

ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಅನುಭವಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಅನ್ನು ಸಿದ್ಧಪಡಿಸಲಾಗುತ್ತದೆ.

  • ಸಂದರ್ಶನ:

ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯು ನೇರ ಸಂದರ್ಶನವನ್ನು ನಡೆಸಿ, ಸಂದರ್ಶನದಲ್ಲಿ ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ನೇಮಕಾತಿ ಅಧಿಸೂಚನೆ ಪ್ರಕಟವಾದ ದಿನಾಂಕ 6-10-2026
ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 6-10-2026
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-10-2026

ಪ್ರಮುಖ ಲಿಂಕುಗಳು:

ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ, ಬಾಗಲಕೋಟೆ ಒಟ್ಟು 10 ಚೀಫ್ ಎಕ್ಸಿಕ್ಯೂಟಿವ್, ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್, ಕಂಪ್ಯೂಟರ್ ಆಪರೇಟರ್, ಅಟೆಂಡರ್ ಹಾಗೂ ಪ್ಯೂನ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದ್ದು, ಸಹಕಾರಿ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ ಈ ಉತ್ತಮ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.

Leave a Reply

Your email address will not be published. Required fields are marked *