BEML: ಬಿಇಎಂಎಲ್ ನಲ್ಲಿ 1,346 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ! ಐಟಿಐ, ಡಿಪ್ಲೊಮಾ, ಪದವೀಧರರಿಗೆ ಭರ್ಜರಿ ಅವಕಾಶ । ಸೆಪ್ಟೆಂಬರ್ 8 ಕೊನೆಯ ದಿನಾಂka
ನಮಸ್ಕಾರ ಸ್ನೇಹಿತರೆ, ನೀವೇನಾದರೂ ಪ್ರ
BEML Recruitment 2026
ತಿಷ್ಠಿತ ಸಾರ್ವಜನಿಕ ವಲಯಗಳ ಸಂಸ್ಥೆಯಲ್ಲಿ ವೃತ್ತಿಪರ ತರಬೇತಿಯನ್ನು ಪಡೆಯುವ ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಸಂತಸದ ಸುದ್ದಿ! ಕೇಂದ್ರ ಸರ್ಕಾರದ ಪ್ರಮುಖ ರಕ್ಷಣಾ ಸಚಿವಾಲದ ಅಧೀನದಲ್ಲಿರುವ ಪ್ರತಿಷ್ಠಿತ ಸಾರ್ವಜನಿಕ ವಲಯಗಳ ಉದ್ಯಮವಾಗಿರುವ ಭಾರತ ಅರ್ಥ್ ಮೂವರ್ಸ್ ಲಿಮಿಟೆಡ್ ಪ್ರಸ್ತುತ 2026 ನೇ ಸಾಲಿನಲ್ಲಿ ಬೃಹತ್ ನೇಮಕಾತಿಗೆ ಚಾಲನೆ ನೀಡಿದ್ದು, ಅಪ್ರೆಂಟಿಸ್ ಕಾಯ್ದೆ 1961 ರ ಅಡಿಯಲ್ಲಿ ಖಾಲಿ ಇರುವ ಬರೋಬ್ಬರಿ 1,346 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ದಿನಾಂಕ 18-08-2026 ರಿಂದ 08-09-2026 ರ ವರೆಗೆ ಕಾಲಾವಕಾಶ ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಸಿಯುವ ಮೊದಲು ಹುದ್ದೆಗೆ ಸಂಬಂಧಿಸಿದ ಅರ್ಹತೆಯನ್ನು ಖಚಿತಪಡಿಸಿಕೊಂಡು ನಂತರ BEML ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಅವಲೋಕನ:
| ಸಂಸ್ಥೆಯ ಹೆಸರು | ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ |
| ಹುದ್ದೆಯ ಹೆಸರು | ಗ್ರ್ಯಾಜುಯೆಟ್ ಅಪ್ರೆಂಟಿಸ್, ಡಿಪ್ಲೊಮಾ ಅಪ್ರೆಂಟಿಸ್, ಐಟಿಐ ಟ್ರೇಡ್ ಅಪ್ರೆಂಟಿಸ್, |
| ಹುದ್ದೆಗಳ ಸಂಖ್ಯೆ | ಒಟ್ಟು 1,346 ಹುದ್ದೆಗಳು |
| ಉದ್ಯೋಗ ಸ್ಥಳ | ಬೆಂಗಳೂರು, ಮೈಸೂರು, ಕೋಲಾರ, ಕೇರಳದ ಪಾಲಕ್ಕಾಡ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 08-09-2026 |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಹುದ್ದೆಯ ಸಂಕ್ಷಿಪ್ತ ವಿವರ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಪ್ರಸ್ತುತ ಸಾಲಿನಲ್ಲಿ ಆಕ್ಟ್ ಅಪ್ರೆಂಟಿಸ್ ಕಾಯ್ದೆ, 1961 ರ ಅಡಿಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯಲ್ಲಿ ಹೊರಡಿಸಿದ್ದು, ಯಾವ ಘಟಕದಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇದೆ ಎನ್ನುವ ಸಂಪೂರ್ಣ ಮಾಹಿತಿ ಈ ಕೆಳಕಂಡಂತಿದೆ.
| ಘಟಕವಾರು ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
|---|---|
| ಕೆಜಿಎಫ್ ಘಟಕ | 608 ಹುದ್ದೆಗಳು |
| ಬೆಂಗಳೂರು ಘಟಕ | 400 ಹುದ್ದೆಗಳು |
| ಮೈಸೂರು ಘಟಕ | 227 ಹುದ್ದೆಗಳು |
| ಕೇರಳದ ಪಾಲಕ್ಕಾಡ್ ಘಟಕ | 111 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- ಗ್ರ್ಯಾಜುಯೆಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 4 ವರ್ಷಗಳ ಪೂರ್ಣಾವಧಿಯ ಬಿಇ, ಬಿಟೆಕ್ ಪದವಿ ಪೂರ್ಣಗೊಳಿಸಿರಬೇಕು.
- ಸಾಮಾನ್ಯ ಪದವಿ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವದ್ಯಾಲಯದಿಂದ ಮೂರು ವರ್ಷಗಳ ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಸಿಎ ಪೂರ್ಣಗೊಳಿಸಿರಬೇಕು.
- ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಮೂರು ವರ್ಷಗಳ ಇಂಜಿನಿಯರಿಂಗ್ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
- ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ (NCVT/SCVT) ಯಿಂದ ಐಟಿಐ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ ವಿವರ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಗ್ರ್ಯಾಜುಯೆಟ್ ಇಂಜಿನಿಯರಿಂಗ್ ಅಪ್ರೆಂಟಿಸ್, ಐಟಿಐ ಟ್ರೇಡ್ ಅಪ್ರೆಂಟಿಸ್, ಡಿಪ್ಲೊಮಾ ಅಪ್ರೆಂಟಿಸ್ ಹಾಗೂ ಸಾಮಾನ್ಯ ಪದವಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 17 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಅಧಿಕೃತ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್ ತರಬೇತಿಗೆ ಯಾವುದೇ ನಿರ್ದಿಷ್ಟ ಗರಿಷ್ಟ ವಯೋಮಿತಿ ಇರುವುದಿಲ್ಲ.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಾವಳಿಗಳ ಪ್ರಕಾರ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ. ಈ ವಿಷಯದ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಅರ್ಜಿ ಶುಲ್ಕ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಯಾವುದೇ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
- ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಟ್ರೇಡ್ ಆಧಾರದ ಮೇಲೆ ಮಾಸಿಕ ರೂ. 9,600/- ರೂ. 10,560/- ವರೆಗೆ ವೇತನವನ್ನು ನೀಡಲಾಗುತ್ತದೆ.
- ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,900/- ವೇತನವನ್ನು ನೀಡಲಾಗುತ್ತದೆ.
- ಗ್ರ್ಯಾಜುಯೆಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹಾಗೂ ಸಾಮಾನ್ಯ ಪದವಿ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,300/- ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಐಟಿಐ, ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ತಿಳಿಸಿರುವ, ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.
- ಐಟಿಐ ಅಭ್ಯರ್ಥಿಗಳು: NAPS ಪೋರ್ಟಲ್ ಮೂಲಕ ನೋಂದಾಯಿಸಿಕೊಂಡು ಪ್ರೊಫೈಲ್ ಅನ್ನು 100% ಪೂರ್ಣಗೊಳಿಸಬೇಕು.
- ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳು NATS ಪೋರ್ಟಲ್ ಮೂಲಕ ರಿಜಿಸ್ಟರ್ ಆಗಿ ಎಂರೊಲ್ಮೆನ್ಟ್ ನಂಬರ್ ಪಡೆಯಬೇಕು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಅಪ್ರೆಂಟಿಸ್ ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ NAPS/ NATS ನೋಂದಣಿ ಸಂಖ್ಯೆಯನ್ನು ನಮೂದಿಸಿ.
- ನಂತರ ಅಲ್ಲಿ ಕೇಳಲಾದ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಸೇರಿದಂತೆ ಇನ್ನಿತರ ಎಲ್ಲ ವಿವರಗಳನ್ನು ಭರ್ತಿ ಮಾಡಿ.
- ನಂತರ ಶೈಕ್ಷಣಿಕ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ಪಾಸ್ ಪೋರ್ಟ್ ಸೈಜ್ ಫೋಟೋ, ಅಭ್ಯರ್ಥಿಗಳ ಸಹಿ ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅರ್ಜಿಯನ್ನು ಇನ್ನೊಮ್ಮೆ ಪರಿಶೀಲಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಅಭ್ಯರ್ಥಿಗಳು ಅಂತಿಮ ವರ್ಷದ ಡಿಪ್ಲೊಮಾ, ಐಟಿಐ, ಪದವಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಅನ್ನು ಸಿದ್ದಪಡಿಸಿ, ಪ್ರತಿ ವಿಭಾಗ ಹಾಗೂ ಟ್ರೇಡ್ ಗೆ ಅನುಗುಣವಾಗಿ 1:5 ಅನುಪಾತದಲ್ಲಿ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ, ದಾಖಲೆಗಳ ಪರಿಶೀಲನೆಗೆ ಕರೆಯಲಾಗುತ್ತಾರೆ. ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ನಡೆಸಿದ ನಂತರ ಮೆಟಿಕಲ್ ಟೆಸ್ಟ್ ಮಾಡಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 18-08-2026 |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 08-09-2026 |
ಅಂತಿಮ ತೀರ್ಮಾನ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಪ್ರಸ್ತುತ ಸಾಲಿನಲ್ಲಿ ಡಿಪ್ಲೊಮಾ ಅಪ್ರೆಂಟಿಸ್, ಗ್ರ್ಯಾಜುಯೆಟ್ ಅಪ್ರೆಂಟಿಸ್, ಐಟಿಐ ಟ್ರೇಡ್ ಅಪ್ರೆಂಟಿಸ್ ಸೇರಿದಂತೆ ಒಟ್ಟು 1346 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತ ಹೊಂದಿರುವ ಅಭ್ಯರ್ಥಿಗಳು ಮೊದಲು ಸಂಬಂಧಿತ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಂಡು ಸೆಪ್ಟೆಂಬರ್ 8, 2026 ರ ಒಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
