CBSL: ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ನೇಮಕಾತಿ 2026! ಪದವಿ ಪಾಸ್ ಆದವರಿಗೆ ಉತ್ತಮ ಅವಕಾಶ । ಸೆಪ್ಟೆಂಬರ್ 15 ಕೊನೆಯ ದಿನ
CBSL Recruitment 2026
ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ಪ್ರಸ್ತುತ ಸಾಲಿನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್, ಆಫೀಸರ್, ಜೂನಿಯರ್ ಆಫೀಸರ್, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ ಹುದ್ದೆಗಳು ಸೇರಿ ಒಟ್ಟು 10 ಹುದ್ದೆಗಳು ಖಾಲಿ ಇದ್ದು, ಹುದ್ದೆಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, MBA ಹಾಗೂ CA ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಸ್ತುತ ಲೇಖನದಲ್ಲಿ, ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ನಲ್ಲಿ ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ? ಎಷ್ಟೆಷ್ಟು ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ? ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಏನು? ಅರ್ಜಿ ಸಲ್ಲಿಸುವುದು ಹೇಗೆ? ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ? ಎನ್ನುವ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ತಿಳಿದುಕೊಳ್ಳೋಣ.
ಹುದ್ದೆಯ ಕಿರು ವಿಮರ್ಶೆ:
| ನೇಮಕಾತಿ ಸಂಸ್ಥೆ | ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ |
| ಹುದ್ದೆಯ ಹೆಸರು | ಅಸಿಸ್ಟೆಂಟ್ ಮ್ಯಾನೇಜರ್, ಆಫೀಸರ್, ಜೂನಿಯರ್ ಆಫೀಸರ್, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ ಹುದ್ದೆಗಳು |
| ಹುದ್ದೆಯ ಸಂಖ್ಯೆ | 10 |
| ಉದ್ಯೋಗ ಸ್ಥಳ | ಬೆಂಗಳೂರು, ಮುಂಬೈ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮತ್ತು ಆಫ್ಲೈನ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-09-2026 |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಕೆನರಾ ಬ್ಯಾಂಕ್ ನ ಅಂಗ ಸಂಸ್ಥೆಯಾಗಿರುವ ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಎಷ್ಟೆಷ್ಟು ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.
| ಹುದ್ದೆಯ ವಿವರ | ಹುದ್ದೆಗಳ ಸಂಖ್ಯೆ |
| ಅಸಿಸ್ಟೆಂಟ್ ವೈಸ್ ಪ್ರಸಿಡೆಂಟ್ | 1 ಹುದ್ದೆ |
| ಅಸಿಸ್ಟೆಂಟ್ ಮ್ಯಾನೇಜರ್ | 2 ಹುದ್ದೆಗಳು |
| ಆಫೀಸರ್ | 3 ಹುದ್ದೆಗಳು |
| ಜೂನಿಯರ್ ಆಫೀಸರ್ | 4 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರುವುದರ ಜೊತೆಗೆ MBA ಅಥವಾ CA ಯಲ್ಲಿ ತೇರ್ಗಡೆ ಹೊಂದಿರಬೇಕು. ಹಾಗೂ ಸಂಬಂಧಿತ ಕ್ಷೇತ್ರದಲ್ಲಿ 5 ರಿಂದ 7 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
- ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯೊಂದಿಗೆ, MBA ಅಥವಾ ತತ್ಸಮಾನ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಹಾಗೂ ಸಂಬಂಧಿತ ಕ್ಷೇತ್ರದಲ್ಲಿ 3 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
- ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 50% ಅಂಕಗಳೊಂದಿಗೆ ಯಾವುದೇ ಪದವಿಯನ್ನು ಪೂರ್ಣಗೊಳಿಸಿರಬೇಕು ಹಾಗೂ ಕಂಪ್ಯೂಟರ್ ಕಾರ್ಯಾಚರಣೆ ಹಾಗೂ ಇಂಟರ್ನೆಟ್ ಬಳಕೆಯ ಸಾಮಾನ್ಯ ಜ್ಞಾನವನ್ನು ಹೊಂದಿರಬೇಕು.
- ಜೂನಿಯರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ PUC ಜೊತೆಗೆ ಡಿಪ್ಲೋಮ ಅಥವಾ ಯಾವುದೇ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು ಹಾಗೂ ಸ್ಥಳೀಯ ಭಾಷೆ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಸಂವಹನ ಕೌಶಲ್ಯವನ್ನು ಹೊಂದಿರಬೇಕು.
ವಯೋಮಿತಿ ವಿವರ:
ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜೂನಿಯರ್ ಆಫೀಸರ್, ಆಫೀಸರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷದಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ
ಅರ್ಜಿ ಶುಲ್ಕ:
ಕೆನರಾ ಬ್ಯಾಂಕ್ ನ ಅಂಗ ಸಂಸ್ಥೆಯಾಗಿರುವ ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್, ಅಸಿಸ್ಟೆಂಟ್ ಮ್ಯಾನೇಜರ್, ಆಫೀಸರ್ ಹಾಗೂ ಜೂನಿಯರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಯಾವುದೇ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ಕೆನರಾ ಬ್ಯಾಂಕ್ ನ ಅಂಗ ಸಂಸ್ಥೆಯಾಗಿರುವ ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ಸಂಸ್ಥೆಯ ನಿಯಮಾವಳಿಗಳ ಪ್ರಕಾರ, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್, ಅಸಿಸ್ಟೆಂಟ್ ಮ್ಯಾನೇಜರ್, ಆಫೀಸರ್ ಹಾಗೂ ಜೂನಿಯರ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಕೆರಿಯರ್ ವಿಭಾಗಕ್ಕೆ ಭೇಟಿ ನೀಡಿ ನಂತರ ಅಲ್ಲಿ ಕಾಣುವ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ. ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಅಫ್ಲಿಕೇಷನ್ ಫಾರ್ಮ್ ನಲ್ಲಿ ಶೈಕ್ಷಣಿಕ ವಿವರ, ವಯೋಮಿತಿ ವಿವರ, ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
- ನಂತರ ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ, ಅನುಭವ ಪ್ರಮಾಣಪತ್ರ ಸೇರಿದಂತೆ ಇನ್ನಿತರ ಅಗತ್ಯ ಪ್ರಮಾಣಪತ್ರವನ್ನು ಭರ್ತಿ ಮಾಡಿದ ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು applications@canmoney.in ಈ ಇಮೇಲ್ ವಿಳಾಸಕ್ಕೆ ಕಳುಹಿಸಿ.
ಆಯ್ಕೆ ಪ್ರಕ್ರಿಯೆ:
- ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಅನುಭವದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಒಳಗೊಂಡ ಶಾರ್ಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ.
- ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕೆ ಕರೆಯಲಾಗುತ್ತದೆ.
- ಅಂತಿಮವಾಗಿ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ನೇಮಕಾತಿ ಅಧಿಸೂಚನೆ ಪ್ರಕಟವಾದ ದಿನಾಂಕ | 20-08-2026 |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-09-2026 |
ಪ್ರಮುಖ ಲಿಂಕುಗಳು:
ಅಂತಿಮ ತೀರ್ಮಾನ:
ಕೆನರಾ ಬ್ಯಾಂಕ್ ನ ಅಂಗ ಸಂಸ್ಥೆಯಾಗಿರುವ ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಬ್ಯಾಂಕಿಂಗ್ ಹಾಗೂ ಹಣಕಾಸು ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
