ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ಪ್ರತಿಷ್ಠಿತ ನವರತ್ನ ಸಾರ್ವಜನಿಕ ವಲಯದ ಸಂಸ್ಥೆಯಾಗಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯು ಪ್ರಸ್ತುತ 2026 ನೇ ಸಾಲಿನಲ್ಲಿ ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಒಟ್ಟು 150 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
HAL Recruitment 2026
ಕೇಂದ್ರ ಸರ್ಕಾರದ ಅಧೀನದಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಸೇರಿದಂತೆ ಇನ್ನಿತರ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000/- ದಿಂದ ರೂ. 1,20,000/- ವರೆಗೆ ವೇತನವನ್ನು ನೀಡಲಾಗುತ್ತಿದ್ದು, ಇವುಗಳ ಜೊತೆಗೆ ಭತ್ಯೆ ಹಾಗೂ ಇತೆರೆ ಸೌಲಭ್ಯಗಳು ಸಹ ಲಭ್ಯವಾಗುತ್ತದೆ. ಆಸಕ್ತ ಅಭ್ಯರ್ಥಿಗಳು 17-10-2026 ರೊಳಗೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ |
| ಹುದ್ದೆಯ ಹೆಸರು | ಜೂನಿಯರ್ ಎಕ್ಸಿಕ್ಯೂಟಿವ್ |
| ಹುದ್ದೆಗಳ ಸಂಖ್ಯೆ | 150 ಹುದ್ದೆಗಳು |
| ಉದ್ಯೋಗ ಸ್ಥಳ | ಬೆಂಗಳೂರು, ತುಮಕೂರು, ಹೈದರಾಬಾದ್, ನಾಸಿಕ್, ಲಕ್ನೋ ಹಾಗೂ ಇನ್ನು ವಿವಿಧ ವಿಭಾಗಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 17-10-2026 |
ಹುದ್ದೆಯ ಸಂಕ್ಷಿಪ್ತ ವಿವರ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 150 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಹುದ್ದೆಗಳನ್ನು ವಿವಿಧ ವಿಭಾಗಗಳಾಗಿ ಹಂಚಿಕೆ ಮಾಡಲಾಗಿದೆ. ಅವುಗಳ ವಿವರ ಈ ಕೆಳಕಂಡಂತಿದೆ.
| ವಿಭಾಗವಾರು ಹುದ್ದೆಯ ವಿವರ | ಹುದ್ದೆಯ ಸಂಖ್ಯೆ |
|---|---|
| ಕೆಮಿಕಲ್ ಇಂಜಿನಿಯರಿಂಗ್ | 02 ಹುದ್ದೆಗಳು |
| ಏರೊನಾಟಿಕಲ್ | 02 ಹುದ್ದೆಗಳು |
| ಮೆಟಲರ್ಜಿ | 03 ಹುದ್ದೆಗಳು |
| ಕಂಪ್ಯೂಟರ್ ಸೈನ್ಸ್ | 06 ಹುದ್ದೆಗಳು |
| ಪ್ರೊಡಕ್ಷನ್ ಇಂಜಿನಿಯರಿಂಗ್ | 06 ಹುದ್ದೆಗಳು |
| ಸಿವಿಲ್ ಇಂಜಿನಿಯರಿಂಗ್ | 07 ಹುದ್ದೆಗಳು |
| ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ | 21 ಹುದ್ದೆಗಳು |
| ಎಲೆಕ್ಟ್ರಿಕಲ್ ಇಂಜಿನಿಯರಿಂಗ್ | 25 ಹುದ್ದೆಗಳು |
| ಮೆಕ್ಯಾನಿಕಲ್ ಇಂಜಿನಿಯರಿಂಗ್ | 78 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
ಜೂನಿಯರ್ ಎಕ್ಸಿಕ್ಯೂಟಿವ್:
ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ಇಂಜಿನಿಯರಿಂಗ್ ವಿಭಾಗದಲ್ಲಿ (ಕೆಮಿಕಲ್, ಆರೋನಾಟಿಕಲ್, ಮೆಟಲರ್ಜಿ, ಕಂಪ್ಯೂಟರ್ ಸೈನ್ಸ್, ಪ್ರೊಡಕ್ಷನ್, ಸಿವಿಲ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್) ಪೂರ್ಣ ಅವಧಿಯ ಬಿಇ, ಬಿಟೆಕ್ ಪದವಿ ಪೂರ್ಣಗೊಳಿಸಿರಬೇಕು.
ಸಾಮಾನ್ಯ ವರ್ಗ, ಒಬಿಸಿ ಹಾಗೂ ಈಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು ಹಾಗೂ SC , ST PwBD ಅಭ್ಯರ್ಥಿಗಳು ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು.
ವಯೋಮಿತಿ ವಿವರ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ದಿನಾಂಕ 17-10-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಇದರನ್ವಯ ಸಾಮಾನ್ಯ ಮತ್ತು EWS ಅಭ್ಯರ್ಥಿಗಳು ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ
- ಒಬಿಸಿ (NCL) ಅಭ್ಯರ್ಥಿಗಳಿಗೆ: 3 ವರ್ಷ
- PwBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
- ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗ, EWS ಅಭ್ಯರ್ಥಿಗಳಿಗೆ: ರೂ. 500/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ವೇತನ ಶ್ರೇಣಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000/- ದಿಂದ ರೂ. 1,20,000/- ವರೆಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಇವುಗಳ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ, 35% ಕ್ಯಾಪಿಟೇರಿಯ ಭತ್ಯೆ, ವೈದ್ಯಕೀಯ ವಿಮೆ ಹಾಗೂ ಇತರೆ ಸೌಲಭ್ಯಗಳು ಲಭ್ಯವಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ ಕೆರಿಯರ್ ವಿಭಾಗದ ಮೇಲೆ ಕ್ಲಿಕ್ ಮಾಡಿ.
- ನಂತರ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
- ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
- ಅಭ್ಯರ್ಥಿಗಳ ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ, ಶೈಕ್ಷಣಿಕ ಅಂಕಪಟ್ಟಿ, ಜಾತಿ ಪ್ರಮಾಣಪತ್ರ ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅಪ್ಲಿಕೇಶನ್ ಫೀಸ್ ಪಾವತಿಸಿ ನಂತರ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಶಾರ್ಟ್ ಲಿಸ್ಟ್:
ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಅನ್ನು ಸಿದ್ದಪಡಿಸಲಾಗುತ್ತದೆ.
- ಸಂದರ್ಶನ:
ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು 1:10 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಒಂದು ಸಂದರ್ಶನವು ನವೆಂಬರ್ ತಿಂಗಳಲ್ಲಿ ನಡೆಯಲಿದ್ದು, ಸಂದರ್ಶನದಲ್ಲಿ ಅಭ್ಯರ್ಥಿಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ಮೂರು ವರ್ಷಗಳ ಒಪ್ಪಂದದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 07-10-2026 |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 17-10-2026 |