October 25, 2026

**IIIT Dharwad Recruitment: Great Job Opportunity! No Application Fee | Last Date: November 9**

IIIT: ಧಾರವಾಡದಲ್ಲಿ ಭರ್ಜರಿ ಉದ್ಯೋಗ ಅವಕಾಶ! ಯಾವುದೇ ಅರ್ಜಿ ಶುಲ್ಕ ಇಲ್ಲ! ಕೊನೆಯ ದಿನಾಂಕ ನವೆಂಬರ್ 9

ಇಂಡಿಯನ್ ಇಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ ಧಾರವಾಡ ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್, ಜೂನಿಯರ್ ಅಸಿಸ್ಟೆಂಟ್, ಫಿಸಿಕಲ್ ಟ್ರೈನಿಂಗ್ ಇನ್ಸ್ಟ್ರಕ್ಟರ್ ಸೇರಿದಂತೆ ಒಟ್ಟು 10 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

IIIT Dharwad Recruitment 2026

ತಾಂತ್ರಿಕ ಹಾಗೂ ಆಡಳಿತಾತ್ಮಕ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗೆ ಅನುಗುಣವಾಗಿ ಪದವಿ, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇಂಡಿಯನ್ ಇಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ ಧಾರವಾಡವು ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಅಕ್ಟೋಬರ್ 5, 2026 ರಂದು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 07-10-2026 ರಿಂದ 09-11-2026 ರ ವರೆಗೆ ಚಾಲ್ತಿಯಲ್ಲಿರಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು IIIT ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿಶ್ಲೇಷಣೆ:

ನೇಮಕಾತಿ ಸಂಸ್ಥೆಯ ಹೆಸರು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ, ಧಾರವಾಡ
ಹುದ್ದೆಯ ಹೆಸರು ಜೂನಿಯರ್ ಇಂಜಿನಿಯರ್, ಜೂನಿಯರ್ ಅಸಿಸ್ಟೆಂಟ್, ಫಿಸಿಕಲ್ ಟ್ರೈನಿಂಗ್ ಇನ್ಸ್ಟ್ರಕ್ಟರ್, ಜೂನಿಯರ್ ಟೆಕ್ನಿಷಿಯನ್
ಹುದ್ದೆಯ ಸಂಖ್ಯೆ ಒಟ್ಟು 10 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಉದ್ಯೋಗ ಸ್ಥಳ ಧಾರವಾಡ – ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09-11-2026

ಹುದ್ದೆಯ ಸಂಕ್ಷಿಪ್ತ ವಿವರ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ, ಧಾರವಾಡ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಇಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಫಿಸಿಕಲ್ ಟ್ರೈನಿಂಗ್ ಇನ್ಸ್ಟ್ರಕ್ಟರ್ 1 ಹುದ್ದೆ
ಜೂನಿಯರ್ ಅಸಿಸ್ಟೆಂಟ್ 2 ಹುದ್ದೆಗಳು
ಜೂನಿಯರ್ ಇಂಜಿನಿಯರ್ 2 ಹುದ್ದೆಗಳು
ಜೂನಿಯರ್ ಟೆಕ್ನಿಷಿಯನ್ 5 ಹುದ್ದೆಗಳು

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಫಿಸಿಕಲ್ ಟ್ರೈನಿಂಗ್ ಇನ್ಸ್ಟ್ರಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಪಿ. ಎಡ್ ಪದವಿಯನ್ನು ಹೊಂದಿರಬೇಕು ಹಾಗೂ ಸಂಬಂಧಿತ ಕ್ಷೇತ್ರದಲ್ಲಿ ಮೂರು ವರ್ಷಗಳ ಅನುಭವವನ್ನು ಹೊಂದಿರಬೇಕು.
  • ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
  • ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ಪೂರ್ಣಗೊಳಿಸಿ 2 ವರ್ಷಗಳ ಅನುಭವವನ್ನು ಹೊಂದಿರಬೇಕು ಅಥವಾ ಸಿವಿಲ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿ 5 ವರ್ಷಗಳ ಅನುಭವವನ್ನು ಹೊಂದಿರಬೇಕು.
  • ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರಬೇಕು ಅಥವಾ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ ವಿಭಾಗದಲ್ಲಿ ಇಂಜಿನಿಯರಿಂಗ್ ಡಿಪ್ಲೊಮಾ ಪದವಿಯನ್ನು ಹೊಂದಿರಬೇಕು ಅಥವಾ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ ವಿಭಾಗದಲ್ಲಿ ಐಟಿಐ ಪೂರ್ಣಗೊಳಿಸಿರಬೇಕು ಜೊತೆಗೆ ಎರಡು ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

ವಯೋಮಿತಿ ವಿವರ:

  • ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಜೂನಿಯರ್ ಅಸಿಸ್ಟೆಂಟ್ ಹಾಗೂ ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 27 ವರ್ಷ ವಯೋಮಿತಿಯನ್ನು ಹೊಂದಿರಬೇಕು
  • ಫಿಸಿಕಲ್ ಟ್ರೈನಿಂಗ್ ಇನ್ಸ್ಟ್ರಕ್ಟರ್ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 32 ವರ್ಷ ವಯೋಮಿತಿಯನ್ನು ಹೊಂದಿರಬೇಕು

ವಯೋಮಿತಿ ಸಡಿಲಿಕೆ ವಿವರ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆ ಹಾಗೂ ಸರ್ಕಾರದ ಕೆಲವು ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಅರ್ಜಿ ಶುಲ್ಕ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್, ಜೂನಿಯರ್ ಅಸಿಸ್ಟೆಂಟ್, ಫಿಸಿಕಲ್ ಟ್ರೈನಿಂಗ್ ಇನ್ಸ್ಟ್ರಕ್ಟರ್, ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ಜೂನಿಯರ್ ಇಂಜಿನಿಯರ್, ಫಿಸಿಕಲ್ ಟ್ರೈನಿಂಗ್ ಇನ್ಸ್ಟ್ರಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ ಮೆಟ್ರಿಕ್ ಲೆವೆಲ್ 6 ರ ಅಡಿಯಲ್ಲಿ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.

ಜೂನಿಯರ್ ಅಸಿಸ್ಟೆಂಟ್, ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ ಮೆಟ್ರಿಕ್ ಲೆವೆಲ್ 3 ರ ಅಡಿಯಲ್ಲಿ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಆಸಕ್ತ ಅಭ್ಯರ್ಥಿಗಳು ಮೊದಲು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ಅಭ್ಯರ್ಥಿಗಳು ಮೊದಲು ತಮ್ಮ ಇಮೇಲ್ ಐಡಿ ಹಾಗೂ ಪಾಸ್ ವರ್ಡ್ ಟೈಪ್ ಮಾಡಿ ಲಾಗಿನ್ ಆಗಿ.
  • ನಂತರ ಕೆರಿಯರ್ ವಿಭಾಗದಲ್ಲಿ ಜೂನಿಯರ್ ಇಂಜಿನಿಯರ್, ಜೂನಿಯರ್ ಅಸಿಸ್ಟೆಂಟ್, ಫಿಸಿಕಲ್ ಟ್ರೈನಿಂಗ್ ಇನ್ಸ್ಟ್ರಕ್ಟರ್, ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ ಸಂಬಂಧಿಸಿದ ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
  • ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಅರ್ಜಿ ಪರಿಶೀಲನೆ
  • ಲಿಖಿತ ಪರೀಕ್ಷೆ
  • ಕೌಶಲ್ಯ ಪರೀಕ್ಷೆ
  • ಅಂತಿಮ ಮೆರಿಟ್ ಪಟ್ಟಿ

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 07-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09-11-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮಶನ್ ಟೆಕ್ನಾಲಜಿ ಪ್ರಸ್ತುತ ಸಾಲಿನಲ್ಲಿ ಜೂನಿಯರ್ ಇಂಜಿನಿಯರ್, ಜೂನಿಯರ್ ಅಸಿಸ್ಟೆಂಟ್, ಫಿಸಿಕಲ್ ಟ್ರೈನಿಂಗ್ ಇನ್ಸ್ಟ್ರಕ್ಟರ್, ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಮಾಡಿದ ಅನುಭವದ ಜೊತೆಗೆ ಈ ಒಂದು ಕ್ಷೇತ್ರದಲ್ಲಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಅರ್ಹ ಅಭ್ಯರ್ಥಿಗಳು ನಿಗದಿತ ಕೊನೆಯ ದಿನಾಂಕದೊಳಗಾಗಿ ಅರ್ಹತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *