October 24, 2026

RRB Recruitment 2026: 1,688 Railway Vacancies Announced! Golden Opportunity for 12th Pass Candidates – Apply Before November 13!

ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ಯುವಜನತೆಗೆ ರೈಲ್ವೆ ನೇಮಕಾತಿ ಮಂಡಳಿಯು ಭರ್ಜರಿ ಗುಡ್ ನ್ಯೂಸ್ ನೀಡಿದೆ! ಪ್ರಸ್ತುತ RRB ಸಂಸ್ಥೆಯು ತಾಂತ್ರಿಕೇತರ ಜನಪ್ರಿಯ ವರ್ಗಗಳ ಅಡಿಯಲ್ಲಿ ಖಾಲಿ ಇರುವ 1688 ಅಂಡರ್ಗ್ರ್ಯಾಜುಯೆಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್, ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಟ್ರೈನ್ಸ್ ಕ್ಲರ್ಕ್ ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ.

RRB Recruitment 2026

ರೈಲ್ವೆ ನೇಮಕಾತಿ ಮಂಡಳಿಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಹಾಗೂ ಕನಿಷ್ಠ 18 ವರ್ಷದಿಂದ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ 7 ನೇ ವೇತನ ಆಯೋಗದ ಅನ್ವಯ ಮಾಸಿಕ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ರೈಲ್ವೆ ಇಲಾಖೆಯಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳು ದಿನಾಂಕ 15-10-2026 ರಿಂದ 13-11-2026 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಕಿರು ವಿಮರ್ಶೆ:

ಸಂಸ್ಥೆಯ ಹೆಸರು ರೈಲ್ವೆ ನೇಮಕಾತಿ ಮಂಡಳಿ
ಸಚಿವಾಲಯ ರೈಲ್ವೆ ಸಚಿವಾಲಯ, ಭಾರತ ಸರ್ಕಾರ
ಹುದ್ದೆಯ ಹೆಸರು ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್, ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಟ್ರೈನ್ಸ್ ಕ್ಲರ್ಕ್ ಹುದ್ದೆಗಳು
ಹುದ್ದೆಯ ಸಂಖ್ಯೆ ಒಟ್ಟು 1688 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-11-2026
ಉದ್ಯೋಗ ಸ್ಥಳ ಅಖಿಲ ಭಾರತ

ಹುದ್ದೆಗಳ ಸಂಕ್ಷಿಪ್ತ ವಿವರ:

ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಇಲ್ಲಿ ಖಾಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ 700 ಹುದ್ದೆಗಳು
ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ 200 ಹುದ್ದೆಗಳು
ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ 600 ಹುದ್ದೆಗಳು
ಟ್ರೈನ್ಸ್ ಕ್ಲರ್ಕ್ ಹುದ್ದೆಗಳು 188 ಹುದ್ದೆಗಳು

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

ರೈಲ್ವೆ ನೇಮಕಾತಿ ಮಂಡಳಿಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್, ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಟ್ರೈನ್ಸ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.

ವಯೋಮಿತಿ ವಿವರ:

ರೈಲ್ವೆ ನೇಮಕಾತಿ ಮಂಡಳಿಯ ಅಂಡರ್ಗ್ರ್ಯಾಜುಯೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 1-1-2027 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಇದಕ್ಕೆ ಅನುಗುಣವಾಗಿ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

  • ಒಬಿಸಿ ಎನ್ಸಿಲ್ ವರ್ಗಗಳ ಅಭ್ಯರ್ಥಿಗಳಿಗೆ: ಮೂರು ವರ್ಷ
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: ಐದು ವರ್ಷ
  • PwBD ಅಭ್ಯರ್ಥಿಗಳಿಗೆ: ವರ್ಗವಾರು 10 ವರ್ಷದಿಂದ 15 ವರ್ಷ
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ: ರೂ. 500/-
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ, ಪಿಡಬ್ಲ್ಯೂಬಿಡಿ, ಒಬಿಸಿ, ಮಹಿಳೆಯರು, ಅಲ್ಪಸಂಖ್ಯಾತರ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಗೆ: ರೂ. 250/-

ಅಭ್ಯರ್ಥಿಗಳು ಇಂಟರ್ನೆಟ್ ಬ್ಯಾಂಕಿಂಗ್, ಯುಪಿಐ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಬಳಸಿ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ:

ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ 7 ನೇ ವೇತನ ಆಯೋಗದ ಅನ್ವಯ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಅವುಗಳ ವಿವರ ಈ ಕೆಳಕಂಡಂತಿದೆ.

  • ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್, ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಟ್ರೈನ್ಸ್ ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ ಲೆವೆಲ್ 2 ರ ಅಡಿಯಲ್ಲಿ ಮಾಸಿಕ ರೂ. 19,900/- ವೇತನವನ್ನು ನೀಡಲಾಗುತ್ತದೆ.
  • ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ ಲೆವೆಲ್ 3 ರ ಅಡಿಯಲ್ಲಿ ಮಾಸಿಕ ರೂ. 21,700/- ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಮೂಲ ವಿವರ, ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿ ಬಳಸಿ ಲಾಗಿನ್ ಆಗಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಶೈಕ್ಷಣಿಕ ಅಂಕಪಟ್ಟಿ, ಪಾಸ್ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಶೈಕ್ಷಣಿಕ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ -I:

ಮೊದಲ ಹಂತದ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಯು ಒಟ್ಟು 100 ಅಂಕಗಳನ್ನು ಒಳಗೊಂಡಿದ್ದು, 100 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಒಟ್ಟು ಪರೀಕ್ಷಾ ಅವಧಿಯು 90 ನಿಮಿಷವಿದ್ದು, ಪ್ರತಿ ತಪ್ಪು ಉತ್ತರಕ್ಕೆ 1/3 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.

  • ಕಂಪ್ಯೂಟರ್ ಆಧಾರಿತ ಪರೀಕ್ಷೆ -II:

ಮೊದಲ ಹಂತದ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳನ್ನು ಎರಡನೇ ಹಂತದ ಲಿಖಿತ ಪರೀಕ್ಷೆಗೆ ಕರೆಯಲಾಗುತ್ತದೆ. ಒಟ್ಟು 120 ಅಂಕಗಳನ್ನು ಒಳಗೊಂಡಿದ್ದು, 120 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಒಟ್ಟು ಪರೀಕ್ಷಾ ಅವಧಿಯು 90 ನಿಮಿಷವಿದ್ದು, ಪ್ರತಿ ತಪ್ಪು ಉತ್ತರಕ್ಕೆ 1/3 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.

  • ದಾಖಲೆ ಪರಿಶೀಲನೆ:

ಕಂಪ್ಯೂಟರ್ ಆಧಾರಿತ ಪರೀಕ್ಷೆ -II ರಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ, ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆಗೆ ಕರೆಯಲಾಗುತ್ತದೆ. ಈ ಹಂತದಲ್ಲಿ ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಶೈಕ್ಷಣಿಕ ಅಂಕಪಟ್ಟಿ, ಜಾತಿ ಪ್ರಮಾಣಪತ್ರ ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತದೆ.

  • ವೈದ್ಯಕೀಯ ಪರೀಕ್ಷೆ:

ದಾಖಲಾತಿ ಪರಿಶೀಲನೆ ಯಶಸ್ವಿಯಾಗಿ ಪೂರ್ಣಗೊಂಡ ನಂತರ ರೈಲ್ವೆ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ನೇಮಕಾತಿ ಅಧಿಸೂಚನೆ ಪ್ರಕಟವಾದ ದಿನಾಂಕ 26-09-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 15-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-11-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 15-11-2026

Leave a Reply

Your email address will not be published. Required fields are marked *