Vijayapura Job: ₹43,200/- ವೇತನ! ವಿಜಯಪುರ ಸಹಕಾರಿ ಬ್ಯಾಂಕ್ ನೇಮಕಾತಿ 2026! SSLC, PUC, ಪದವೀಧರರಿಗೆ ಭರ್ಜರಿ ಅವಕಾಶ! ಸೆಪ್ಟೆಂಬರ್ 15 ಕೊನೆಯ ದಿನ
ನಮಸ್ಕಾರ ಸ್ನೇಹಿತರೆ, ನೀವೇನಾದರೂ SSLC, PUC, ಪದವಿ ಪೂರ್ಣಗೊಳಿಸಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗದ ಕನಸು ಕಾಣುತ್ತಿದ್ದೀರಾ? ನಿಮ್ಮ ಈ ಕನಸನ್ನು ನನಸು ಮಾಡಿಕೊಳ್ಳಲು ಇದು ಉತ್ತಮ ಅವಕಾಶ! ವಿಜಯಪುರದ ಪ್ರ
ತಿಷ್ಠಿತ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಪ್ರಸ್ತುತ ಸಾಲಿನಲ್ಲಿ ಜೂನಿಯರ್ ಮ್ಯಾನೇಜರ್, ಸೀನಿಯರ್ ಅಸಿಸ್ಟೆಂಟ್, ಕ್ಲರ್ಕ್, ಡ್ರೈವರ್, ಅಟೆಂಡೆಂಟ್, ಪಿಯೂನ್ ಹಾಗೂ ನೈಟ್ ವಾಚ್ ಮೆನ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ವೃತ್ತಿ ಜೀವನವನ್ನು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ದಿನಾಂಕ 26-09-2026 ರಿಂದ 15-09-2026 ರ ವರೆಗೆ ಕಾಲಾವಕಾಶ ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ರೂ. 14,550/- ದಿಂದ ರೂ. 43,200/- ವರೆಗೆ ವೇತನವನ್ನು ನೀಡಲಾಗುತ್ತದೆ.
ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜೂನಿಯರ್ ಮ್ಯಾನೇಜರ್, ಸೀನಿಯರ್ ಅಸಿಸ್ಟೆಂಟ್, ಕ್ಲರ್ಕ್, ಪಿಯೂನ್, ಡ್ರೈವರ್, ಅಟೆಂಡರ್ ಸೇರಿದಂತೆ ಇನ್ನಿತರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗವರು ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅವುಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ.
ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ಸಿದ್ದೇಶ್ವರ ಸಹಕಾರಿ ಬ್ಯಾಂಕ್, ವಿಜಯಪುರ |
| ಹುದ್ದೆಯ ಹೆಸರು | ಜೂನಿಯರ್ ಮ್ಯಾನೇಜರ್, ಸೀನಿಯರ್ ಅಸಿಸ್ಟೆಂಟ್, ಕ್ಲರ್ಕ್, ಪಿಯೂನ್, ಡ್ರೈವರ್, ಅಟೆಂಡರ್ ಹಾಗೂ ನೈಟ್ ವಾಚ್ ಮೆನ್ ಹುದ್ದೆಗಳು |
| ಹುದ್ದೆಗಳ ಸಂಖ್ಯೆ | ಒಟ್ಟು 60 ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ ಮಾತ್ರ |
| ಉದ್ಯೋಗ ಸ್ಥಳ | ವಿಜಯಪುರ – ಕರ್ನಾಟಕ |
ಹುದ್ದೆಯ ಸಂಕ್ಷಿಪ್ತ ವಿವರ:
ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಇಲ್ಲಿ ಖಾಲಿ ಇರುವ 60 ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಿದ್ದು, ಈ ಹುದ್ದೆಗಳ ಸಂಪೂರ್ಣ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
|---|---|
| ಸೀನಿಯರ್ ಅಸಿಸ್ಟೆಂಟ್ | 10 ಹುದ್ದೆಗಳು |
| ಕ್ಲರ್ಕ್/ ಜೂನಿಯರ್ ಅಸಿಸ್ಟೆಂಟ್ | 15 ಹುದ್ದೆಗಳು |
| ಜೂನಿಯರ್ ಮ್ಯಾನೇಜರ್ | 06 ಹುದ್ದೆಗಳು |
| ಅಟೆಂಡರ್ | 3 ಹುದ್ದೆಗಳು |
| ಡ್ರೈವರ್ | 1 ಹುದ್ದೆಗಳು |
| ಪಿಯೂನ್ | 19 ಹುದ್ದೆಗಳು |
| ನೈಟ್ ವಾಚ್ ಮ್ಯಾನ್ | 6 ಹುದ್ದೆಗಳು |
ವಿದ್ಯಾರ್ಹತೆ:
- ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 60% ಅಂಕಗಳೊಂದಿಗೆ ಪದವಿ ಪೂರ್ಣಗೊಳಿಸಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ಕ್ಲರ್ಕ್ ಅಥವಾ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 60% ಅಂಕಗಳೊಂದಿಗೆ ಪದವಿ ಪೂರ್ಣಗೊಳಿಸಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ಜೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಕಂಪ್ಯೂಟರ್ ಜ್ಞಾನವನ್ನು ಸಹ ಹೊಂದಿರಬೇಕು. ಇವುಗಳ ಜೊತೆಗೆ ಹಣಕಾಸು ಸಂಸ್ಥೆಗಳಲ್ಲಿ ಮೂರು ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
- ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಚಾಲ್ತಿಯಲ್ಲಿರುವ ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
- ಪಿಯೂನ್ ಹಾಗೂ ನೈಟ್ ವಾಚ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ ವಿವರ:
ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಗರಿಷ್ಟ ವಯೋಮಿತಿಯ ವಿವರ ಈ ಕೆಳಕಂಡಂತಿದೆ.
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು: 35 ವರ್ಷ
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು: 38 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1 ರ ಅಭ್ಯರ್ಥಿಗಳು: 40 ವರ್ಷ
ವಯೋಮಿತಿ ಸಡಿಲಿಕೆ ವಿವರ:
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಸೇವಾ ಅವಧಿಯ ಜೊತೆಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.
- ವಿಧವಾ ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿಯನ್ನು ಹತ್ತು ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.
ಅರ್ಜಿ ಶುಲ್ಕ:
- ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: ರೂ. 1200/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -I ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 600/-
ವೇತನ ಶ್ರೇಣಿ:
- ಸೀನಿಯರ್ ಅಸಿಸ್ಟೆಂಟ್: ರೂ. 21,600/- ದಿಂದ ರೂ. 40,050/-
- ಕ್ಲರ್ಕ್ / ಜೂನಿಯರ್ ಅಸಿಸ್ಟೆಂಟ್: ರೂ. 20,000/- ದಿಂದ ರೂ. 36,300/-
- ಜೂನಿಯರ್ ಮ್ಯಾನೇಜರ್: ರೂ. 22,800/- ದಿಂದ ರೂ. 43,200/-
- ಅಟೆಂಡರ್: ರೂ. 14,550/- ದಿಂದ ರೂ. 26,700/-
- ಡ್ರೈವರ್: ರೂ. 14,550/- ದಿಂದ ರೂ. 26,700/-
- ಪಿಯೂನ್: ರೂ. 14,550/- ದಿಂದ ರೂ. 26,700/-
- ನೈಟ್ ವಾಚ್ ಮೆನ್: ರೂ. 14,550/- ದಿಂದ ರೂ. 26,700/-
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳುಮೊದಲು ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ.
- ನಂತರ ಮುಖಪುಟದಲ್ಲಿರುವ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಜಾಬ್ ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಓದಿಕೊಳ್ಳಿ.
- ನಂತರ ಆನ್ಲೈನ್ ಅಪ್ಲಿಕೇಶನ್ ಲಿಂಕ್ ಅನ್ನು ಆಯ್ಕೆ ಮಾಡಿಕೊಳ್ಳಿ.
- ನಂತರ ನಿಗದಿತ ಅರ್ಜಿ ಫಾರ್ಮ್ ನಲ್ಲಿ ನಿಮ್ಮ ವೈಯಕ್ತಿಕ ವಿವರ, ಶೈಕ್ಷಣಿಕ ವಿವರದ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಭರ್ತಿ ಮಾಡಿ.
- ಅಭ್ಯರ್ಥಿಗಳ ಪಾಸ್ ಪೋರ್ಟ್ ಅಳತೆಯ ಫೋಟೋ, ಸಹಿಯನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಅಟೆಂಡರ್, ಪಿಯೂನ್, ಡ್ರೈವರ್, ವಾಚ್ ಮ್ಯಾನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಅವರು SSLC ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆದು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
- ಜೂನಿಯರ್ ಮ್ಯಾನೇಜರ್, ಸೀನಿಯರ್ ಅಸಿಸ್ಟೆಂಟ್, ಜೂನಿಯರ್ ಅಸಿಸ್ಟೆಂಟ್/ ಕ್ಲರ್ಕ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಮೊದಲ ಹಂತದಲ್ಲಿ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯನ್ನು ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ, ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಕರೆಯಲಾಗುತ್ತದೆ. ಈ ಪರೀಕ್ಷೆಯು ಒಟ್ಟು 200 ಅಂಕಗಳನ್ನು ಒಳಗೊಂಡಿದ್ದು, ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಅಂತಿಮವಾಗಿ ಸಂದರ್ಶನ ಹಾಗೂ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 26-08-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-09-2026 |
ಪ್ರಮುಖ ಲಿಂಕುಗಳು:
ಅಂತಿಮ ತೀರ್ಮಾನ:
ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಜೂನಿಯರ್ ಮ್ಯಾನೇಜರ್, ಸೀನಿಯರ್ ಅಸಿಸ್ಟೆಂಟ್, ಕ್ಲರ್ಕ್, ಪಿಯೂನ್, ಡ್ರೈವರ್, ಅಟೆಂಡರ್ ಹಾಗೂ ನೈಟ್ ವಾಚ್ ಮೆನ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಹುದ್ದೆಗೆ ಅನುಗುಣವಾಗಿ SSLC ಹಾಗೂ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 15-09-2026 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಅತ್ಯಾಕರ್ಷಕ ವೇತನವಿರುವ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಿ.
